Loading video

ರಾಮನಗರ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ತಪ್ಪಿದ ಅನಾಹುತ, ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!

| Updated By: Ganapathi Sharma

Updated on: Feb 16, 2025 | 6:20 PM

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಇತ್ತೀಚೆಗೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿರುವುದೇನೋ ನಿಜ. ಆದರೆ, ಚಾಲಕರ ನಿರ್ಲಕ್ಷದಿಂದ ಅಲ್ಲೊಂದು ಇಲ್ಲೊಂದು ಎಂಬಂತೆ ಅಪಘಾತಗಳು ಸಂಭವಿಸುತ್ತದೆ. ರಾಮನಗರ ಬಳಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಒಂದು ಕಾರು ಇನ್ನೊಂದು ಕಾರಿನ ಮೇಲೆ ಏರಿದೆ. ಅದೃಷ್ಟವಶಾತ್, ಭಾರಿ ಅನಾಹುತ ತಪ್ಪಿದೆ.

ರಾಮನಗರ, ಫೆಬ್ರವರಿ 16: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಕಾರೊಂದು ಮತ್ತೊಂದು ಕಾರಿನ ಮೇಲೆ ಹತ್ತಿದೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಬ್ಯಾರಿಕೇಡ್ ಗಮನಿಸದೆ ಹಠಾತ್ತಾಗಿ ಕಾರು ಚಾಲಕ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿಯಾಗಿ ಗುದ್ದಿದ ರಭಸಕ್ಕೆ ಇನ್ನೊಂದು ಕಾರಿನ ಮೇಲೇರಿ ಹೋಗಿದೆ. ಅದೃಷ್ಟವಶಾತ್ 2 ಕಾರುಗಳಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ