ಪೊಲೀಸ್ ಭವನದಲ್ಲೇ ಬಿಡದಿ ರೈತರ ಉಪವಾಸ ಸತ್ಯಾಗ್ರಹ: ‘ಭೂಮಿ ಬಿಡಿ, ಇಲ್ಲಾ ದಯಾಮರಣ ಕೊಡಿ’ ಎಂದು ಆಕ್ರೋಶ

Edited By:

Updated on: Sep 25, 2026 | 11:10 PM

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಬೈರಮಂಗಲದಲ್ಲಿ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನಪಟ್ಟಣದ ಪೊಲೀಸ್ ಭವನಕ್ಕೆ ಕರೆತಂದರೂ ರೈತರು ಹೋರಾಟ ಮುಂದುವರಿಸಿದ್ದಾರೆ. ಕೃಷಿ ಭೂಮಿ ಉಳಿಸುವಂತೆ ಅಥವಾ ದಯಾಮರಣಕ್ಕೆ ಅನುಮತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ವಶಕ್ಕೆ ಪಡೆಯುವ ವೇಳೆ ಮಹಿಳೆಯೊಬ್ಬರು ಅಸ್ವಸ್ಥಗೊಂಡರು.

ರಾಮನಗರ, ಸೆಪ್ಟೆಂಬರ್​​ 25: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ರಾಮನಗರ ತಾಲೂಕಿನ ಬೈರಮಂಗಲ ಗ್ರಾಮದಲ್ಲಿ ಕಳೆದ 5 ದಿನಗಳಿಂದ ರೈತರು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಇಂದು ಪೊಲೀಸರು ಅವರನ್ನು ವಶಕ್ಕೆ ಪಡೆದು ಚನ್ನಪಟ್ಟಣದ ಪೊಲೀಸ್ ಭವನಕ್ಕೆ ಸ್ಥಳಾಂತರಿಸಿದರು. ತಮ್ಮ ಹೋರಾಟವನ್ನು ನಿಲ್ಲಿಸದ ರೈತರು, ಪೊಲೀಸ್ ಭವನದಲ್ಲಿಯೂ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ಬಿಡದಿ ಟೌನ್​ಶಿಪ್ ಯೋಜನೆ ಕೈಬಿಡದಿದ್ದರೆ ದಯಾಮರಣ ಕೊಡಿ ಎಂದು
ರೈತರು ಕೈಯಲ್ಲಿ ದಯಾಮರಣ ಅರ್ಜಿ ಹಿಡಿದು ಪ್ರತಿಭಟನೆ ನಡೆಸಿದ್ದು, ಜಡ್ಜ್ ಮುಂದೆ ಹಾಜರುಪಡಿಸಿದರೆ ಮನವಿ ಮಾಡುತ್ತೇವೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More