ದೇವಸ್ಥಾನದೊಳಗೆ ಹೋಗದಂತೆ ನಿಖಿಲ್ ಕುಮಾರಸ್ವಾಮಿಗೆ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನಕ್ಕೆ ತೆರಳುವುದಕ್ಕೆ ನಿಖಿಲ್ ಕುಮಾರಸ್ವಾಮಿಗೆ ಅಡ್ಡಿ ಪ್ರಕರಣಕ್ಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಅಡ್ಡಿಪಡಿಸಿದ್ದ ಕಾಂಗ್ರೆಸ್ ಮುಖಂಡ ಅನಿಲ್ ಅವರು ಕ್ಷಮೆಯಾಚಿಸಿದ್ದಾರೆ. ನ.13ರಂದು ದೊಡ್ಡ ಕುರುಬರಹಳ್ಳಿಯ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ನಿಖಿಲ್ ತೆರಳುವುದಕ್ಕೆ ಅಡ್ಡಿಪಡಿಸಲಾಗಿತ್ತು. ಘಟನೆಗೆ ಅನಿಲ್ ಕಾರಣನಾಗಿದ್ದು, ಇದೀಗ ತಪ್ಪಿನ ಅರಿವಾಗಿ ನಿಖಿಲ್ ಕುಮಾರಸ್ವಾಮಿಗೆ ಕ್ಷಮೆ ಕೇಳಿದ್ದಾರೆ.
ರಾಮನಗರ, (ನವೆಂಬರ್ 17): ದೇವಸ್ಥಾನಕ್ಕೆ ತೆರಳುವುದಕ್ಕೆ ನಿಖಿಲ್ ಕುಮಾರಸ್ವಾಮಿಗೆ ಅಡ್ಡಿ ಪ್ರಕರಣಕ್ಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಇದೀಗ ಅಡ್ಡಿಪಡಿಸಿದ್ದ ಕಾಂಗ್ರೆಸ್ ಮುಖಂಡ ಅನಿಲ್ ಅವರು ಕ್ಷಮೆಯಾಚಿಸಿದ್ದಾರೆ. ನ.13ರಂದು ದೊಡ್ಡ ಕುರುಬರಹಳ್ಳಿಯ ಬಿಸಿಲು ಮಾರಮ್ಮ ದೇವಸ್ಥಾನಕ್ಕೆ ನಿಖಿಲ್ ತೆರಳುವುದಕ್ಕೆ ಅಡ್ಡಿಪಡಿಸಲಾಗಿತ್ತು. ಘಟನೆಗೆ ಅನಿಲ್ ಕಾರಣನಾಗಿದ್ದು, ಇದೀಗ ತಪ್ಪಿನ ಅರಿವಾಗಿ ನಿಖಿಲ್ ಕುಮಾರಸ್ವಾಮಿಗೆ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಅನಿಲ್, ಉದ್ದೇಶಪೂರ್ವಕವಾಗಿ ನಾನು ದೇವಸ್ಥಾನದ ಬಾಗಿಲು ಹಾಕಿಲ್ಲ. ನಾನು ಸಹ ಈ ಹಿಂದೆ ಜೆಡಿಎಸ್ ಪಕ್ಷದಲ್ಲಿ ಇದ್ದವನು. ಹೀಗಾಗಿ ನಿಖಿಲ್ ಕುಮಾರಸ್ವಾಮಿಗೆ ಕ್ಷಮಾಪಣೆ ಕೇಳುತ್ತೇನೆ. ಯಾವಾಗ ಬೇಕಾದರೂ ನಿಖಿಲ್ ಅವರು ದೇವಸ್ಥಾನಕ್ಕೆ ಬರಬಹುದು ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

