AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್

ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ: ಕುಡಿದ ಮತ್ತಿನಲ್ಲಿ ಚಾಲಕ-ಕಂಡಕ್ಟರ್ ಜೊತೆ ಕಿರಿಕ್

ಪ್ರಶಾಂತ್​ ಬಿ.
| Edited By: |

Updated on:Apr 20, 2026 | 5:10 PM

Share

ರಾಮನಗರದ ಬಿಡದಿಯಲ್ಲಿ ತಡರಾತ್ರಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಿದ್ದಾನೆ. ಚಾಲಕನ ರ‌್ಯಾಶ್ ಡ್ರೈವಿಂಗ್‌ನಿಂದ ಬಸ್‌ನೊಳಗೆ ಬಿದ್ದು ಮೂಗಿಗೆ ಗಾಯವಾಗಿತ್ತು ಎಂದು ಆತ ಆರೋಪಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ವ್ಯಕ್ತಿ ಬಸ್‌ನ ಮುಂಭಾಗದ ಗ್ಲಾಸ್‌ಗೆ ಹಾನಿ ಮಾಡಿದ್ದಾನೆ. ಚಾಲಕ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಮನಗರ, ಏಪ್ರಿಲ್​ 20: ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್​ಗೆ ಓರ್ವ ವ್ಯಕ್ತಿ ಕಲ್ಲು ತೂರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಬಸ್ ಚಾಲಕ ರ‍್ಯಾಶ್ ಡ್ರೈವಿಂಗ್ ಮಾಡಿದ ಎಂದು ಬಸ್ ಮುಂಭಾಗದ ಗ್ಲಾಸ್​​ಗೆ ಕಲ್ಲು ತೂರಿದ್ದಾನೆ. ಕುಡಿದ ಮತ್ತಿನಲ್ಲಿ ಬೆಂಗಳೂರಿನಿಂದ ಬಿಡದಿಗೆ ಬಿಎಂಟಿಸಿ ಬಸ್‌ನಲ್ಲಿ ಬಂದಿದ್ದ ವ್ಯಕ್ತಿ, ಬಸ್ ಚಾಲಕ ಅತಿ ವೇಗವಾಗಿ ಮತ್ತು ಅಜಾಗರೂಕತೆಯಿಂದ ಗಾಡಿ ಓಡಿಸಿದ್ದರಿಂದ ಬಸ್ ಒಳಗಿದ್ದ ತನಗೆ ಪೆಟ್ಟಾಗಿ, ಮೂಗಿನಿಂದ ರಕ್ತ ಬಂದಿದೆ ಎಂದು ಆರೋಪಿಸಿ ರಂಪಾಟ ಮಾಡಿದ್ದಾನೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಗೆ ಬಸ್ ಚಾಲಕ ದೂರು ದಾಖಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 20, 2026 05:07 PM
Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More