AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ

ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ

ಪ್ರಶಾಂತ್​ ಬಿ.
| Edited By: |

Updated on: Aug 19, 2026 | 4:37 PM

Share

ರಾಮನಗರ ಜಿಲ್ಲೆಯ ವೃಷಭಾಪುರ ಗ್ರಾಮದ ಬಳಿಯ ವೃಷಭಾವತಿ ನದಿಯಲ್ಲಿ 20 ಕಂತೆಗಳ ನಕಲಿ 500 ರೂ ನೋಟುಗಳು ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆರಂಭದಲ್ಲಿ ಅಸಲಿ ಎಂದು ಭಾವಿಸಿ ಜನ ಸೇರಿದ್ದರು. ಆದರೆ, ಅವು ನಕಲಿ ಎಂದು ತಿಳಿದ ಮೇಲೆ ಸ್ಥಳದಿಂದ ತೆರಳಿದರು. ದುಷ್ಕರ್ಮಿಗಳು ಈ ಕಂತೆಗಳನ್ನು ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ರಾಮನಗರ, ಆಗಸ್ಟ್​​ 19: ರಾಮನಗರದ ದೊಡ್ಡೇರಿ ಗ್ರಾಮದ ಬಳಿ ಫಾರ್ಮ್‌ಹೌಸ್‌ನಲ್ಲಿ ಕೋಟಿ ಕೋಟಿ ಮೌಲ್ಯದ ಫೇಕ್​​ ಮೆಡಿಸಿನ್​ ಜಾಲ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ವೃಷಭಾಪುರ ಗ್ರಾಮದ ಬಳಿಯ ವೃಷಭಾವತಿ ನದಿಯಲ್ಲಿ ಕಂತೆ ಕಂತೆ ನೋಟುಗಳು ತೇಲುತ್ತಿರುವುದನ್ನು ಕಂಡು ಸ್ಥಳೀಯರು ಕೆಲಕಾಲ ದಂಗಾಗಿ ನಿಂತ ಘಟನೆ ನಡೆದಿದೆ. 500 ಮುಖಬೆಲೆಯ ಬರೋಬ್ಬರಿ 20 ಕಂತೆ ನೋಟುಗಳು ನೀರಿನಲ್ಲಿ ಬಿದ್ದಿರುವುದನ್ನು ಕಂಡ ಗ್ರಾಮಸ್ಥರು ಮೊದಲಿಗೆ ಅಸಲಿ ಹಣವೇ ಇರಬೇಕೆಂದು ಭಾವಿಸಿದ್ದರು. ಆದರೆ, ಹತ್ತಿರ ಹೋಗಿ ಪರಿಶೀಲಿಸಿದಾಗ ಅಪರಿಚಿತ ವ್ಯಕ್ತಿಗಳು ಎಸೆದು ಹೋಗಿರುವ ಆ ಎಲ್ಲಾ ನೋಟುಗಳು ನಕಲಿ ಎಂಬುದು ಬಯಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More