ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್: FDA ಅಧಿಕಾರಿಗಳ ದಾಳಿ; 5 ಕೋಟಿ ರೂ. ಮೌಲ್ಯದ ಸರಕು ಜಪ್ತಿ

Edited By:

Updated on: Aug 18, 2026 | 8:48 PM

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ರಾಮನಗರದ ಬಿಡದಿ ಬಳಿ ಭರ್ಜರಿ ಕಾರ್ಯಾಚರಣೆ ನಡೆಸಿ, 5 ಕೋಟಿ ರೂ.ಗೂ ಅಧಿಕ ಮೌಲ್ಯದ ಬೃಹತ್ ನಕಲಿ ಔಷಧ ತಯಾರಿಕಾ ಮತ್ತು ಮರು-ಪ್ಯಾಕಿಂಗ್ ದಂಧೆಯನ್ನು ಭೇದಿಸಿದೆ. ಯಾವುದೇ ಪರವಾನಗಿ ಇಲ್ಲದೆ, MNC ಬ್ರ್ಯಾಂಡ್‌ಗಳ ನಕಲಿ ಲೇಬಲ್‌ಗಳನ್ನು ಬಳಸಿ ಅಕ್ರಮವಾಗಿ ಮಾತ್ರೆಗಳನ್ನು ತಯಾರಿಸಿ ಮರು-ಪ್ಯಾಕ್ ಮಾಡಲಾಗುತ್ತಿತ್ತು. ಈ ದಾಳಿಯಿಂದ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ತಂದೊಡ್ಡುವ ದಂಧೆ ಬಯಲಾಗಿದೆ.

ರಾಮನಗರ, ಆ.18: ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ (FDA) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಿಡದಿ ಸಮೀಪದ ಹೆಜ್ಜಾಲ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ನಕಲಿ ಔಷಧ ತಯಾರಿಕಾ ಮತ್ತು ಮರು-ಪ್ಯಾಕಿಂಗ್ ದಂಧೆಯನ್ನು ಭೇದಿಸಿದ್ದಾರೆ. ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ಹಾಗೂ ಅಪರ ಔಷಧ ನಿಯಂತ್ರಕ ಡಾ. ಉಮೇಶ್ ಅವರ ನೇತೃತ್ವದಲ್ಲಿ ನಡೆಸಿದ ಈ ದಾಳಿಯಲ್ಲಿ 5 ಕೋಟಿ ರೂ.ಗೂ ಅಧಿಕ ಮೌಲ್ಯದ ನಕಲಿ ಔಷಧಗಳನ್ನು ಜಪ್ತಿ ಮಾಡಲಾಗಿದೆ. ಖ್ಯಾತ ಬಹುರಾಷ್ಟ್ರೀಯ (MNC) ಹಾಗೂ ಪ್ರಸಿದ್ಧ ಬ್ರ್ಯಾಂಡೆಡ್ ಕಂಪನಿಗಳ ಹೆಸರಿನ ನಕಲಿ ಲೇಬಲ್‌ಗಳನ್ನು ಬಳಸಿ ಔಷಧಗಳನ್ನು ಮರು-ಪ್ಯಾಕ್ ಮಾಡಿ ಮಾರುಕಟ್ಟೆಗೆ ಸರಬರಾಜು ಮಾಡಲಾಗುತ್ತಿತ್ತು. ಯಾವುದೇ ಸರ್ಕಾರಿ ಲೈಸೆನ್ಸ್ ಹಾಗೂ ಪರವಾನಗಿ ಇಲ್ಲದೆ ರಹಸ್ಯವಾಗಿ ಈ ಆವರಣದಲ್ಲಿ ನಕಲಿ ಔಷಧ ತಯಾರಿಕೆ ಮತ್ತು ಪ್ಯಾಕಿಂಗ್ ಪ್ರಕ್ರಿಯೆ ನಡೆಯುತ್ತಿತ್ತು. ದಾಳಿಯ ವೇಳೆ ಸ್ಥಳದಲ್ಲಿದ್ದ ಭಾರಿ ಪ್ರಮಾಣದ ನಕಲಿ ಮಾತ್ರೆಗಳು, ಕಚ್ಚಾವಸ್ತುಗಳು ಹಾಗೂ ಲೇಬಲಿಂಗ್ ಸಾಮಗ್ರಿಗಳ ಒಟ್ಟು ಮೌಲ್ಯ ಅಂದಾಜು 5 ಕೋಟಿಗೂ ಹೆಚ್ಚು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ್ ನೇತೃತ್ವದ ವಿಶೇಷ ತಂಡವು ಸ್ಥಳದಲ್ಲಿದ್ದ ಪ್ರತಿಯೊಂದು ಕಚ್ಚಾವಸ್ತು ಹಾಗೂ ಔಷಧೀಯ ಸಾಮಗ್ರಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸೀಲ್ ಮಾಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More