AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ: ಅಂಗಡಿ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ತೀವ್ರ ವಿರೋಧ

ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ: ಅಂಗಡಿ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳ ತೀವ್ರ ವಿರೋಧ

ಪ್ರಶಾಂತ್​ ಬಿ.
| Edited By: |

Updated on: Aug 21, 2026 | 5:25 PM

Share

ರಾಮನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುತ್ತಿರುವ ಅಂಗಡಿಗಳ ತೆರವು ಕಾರ್ಯಾಚರಣೆಯು ತೀವ್ರ ವಿರೋಧಕ್ಕೆ ಕಾರಣವಾಗಿದೆ. ಯಾವುದೇ ಪೂರ್ವ ಸೂಚನೆ ಅಥವಾ ನ್ಯಾಯಾಲಯದ ಆದೇಶವಿಲ್ಲದೆ ತಮ್ಮ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಆರೋಪಿಸಿ ವ್ಯಾಪಾರಿಗಳು ಪ್ರತಿಭಟಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ ಪ್ರಸಂಗ ನಡೆದಿದೆ.

ರಾಮನಗರ, ಆಗಸ್ಟ್​​ 21: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಂಗಡಿ ತೆರವು ಕಾರ್ಯಾಚರಣೆಗೆ ವ್ಯಾಪಾರಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯಾವುದೇ ಪೂರ್ವ ಮಾಹಿತಿ ಅಥವಾ ನ್ಯಾಯಾಲಯದ ಆದೇಶವಿಲ್ಲದೆ ತಮ್ಮ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವನೋಪಾಯದ ಬಗ್ಗೆ ಕಳವಳ ವ್ಯಕ್ತಪಡಿಸಿ, ಕೋರ್ಟ್ ಆದೇಶ ತೋರಿಸುವಂತೆ ಒತ್ತಾಯಿಸಿದ್ದಾರೆ. ಇದು ಸ್ಥಳದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us