ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್‌ಗೆ ಅವರು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ತೆರಳಿ ಇಕ್ಬಾಲ್ ಹುಸೇನ್ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.
ಬೆಂಗಳೂರು, ಜೂನ್ 15: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಲ್ಲಯ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾರ್ಟ್ ಬ್ಲಾಕ್ ಹಿನ್ನೆಲೆ ಈ ಹಿಂದೆ ಶಾಸಕರಿಗೆ ಸ್ಟಂಟ್ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಈ ನಡುವೆ ಆಗಾಗ ಬಿಪಿಯಲ್ಲಿ ವ್ಯತ್ಯಯ ಹಿನ್ನೆಲೆ ಇಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಸಿಎಂ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಲಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ

