ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ರಾಮನಗರ ಕಾಂಗ್ರೆಸ್​​ ಶಾಸಕ ಇಕ್ಬಾಲ್ ಹುಸೇನ್

Edited By:

Updated on: Jun 15, 2026 | 11:19 AM

ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್‌ಗೆ ಅವರು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ತೆರಳಿ ಇಕ್ಬಾಲ್ ಹುಸೇನ್ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಬೆಂಗಳೂರು, ಜೂನ್​​ 15: ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯದ ಬ್ಲಾಕೇಜ್ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಬೆಂಗಳೂರಿನ ಮಲ್ಲಯ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಾರ್ಟ್ ಬ್ಲಾಕ್ ಹಿನ್ನೆಲೆ ಈ ಹಿಂದೆ ಶಾಸಕರಿಗೆ ಸ್ಟಂಟ್​ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. ಈ ನಡುವೆ ಆಗಾಗ ಬಿಪಿಯಲ್ಲಿ ವ್ಯತ್ಯಯ ಹಿನ್ನೆಲೆ ಇಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಸಿಎಂ ಡಿ.ಕೆ. ಶಿವಕುಮಾರ್​​ ಆಸ್ಪತ್ರೆಗೆ ಭೇಟಿ ನೀಡಿ ಇಕ್ಬಾಲ್ ಹುಸೇನ್ ಆರೋಗ್ಯ ವಿಚಾರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More