ರಾಮನಗರ: HD ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲಿ ಎಂದು JDS ಮುಖಂಡರಿಂದ ವಿಶೇಷ ಪೂಜೆ

| Updated By: ಆಯೇಷಾ ಬಾನು

Updated on: Aug 31, 2023 | 12:30 PM

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ JDS ಮುಖಂಡರು ಕುಮಾರಸ್ವಾಮಿ ಶೀಘ್ರ ಗುಣಮುಖವಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಂಗಲ್ ಆಂಜನೇಯಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಒಡೆದಿದ್ದಾರೆ.

ರಾಮನಗರ, ಆ.31: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy Health) ಅವರ ಆರೋಗ್ಯದಲ್ಲಿ ಏರುಪೇರು ಹಿನ್ನಲೆ ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆಯಲ್ಲಿ(Jayanagar Apollo Hospital) ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿರವಾಗಿದ್ದು ಗುಣಮುಖರಾಗುತ್ತಿದ್ದಾರೆ. ಇನ್ನು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ JDS ಮುಖಂಡರು ಕುಮಾರಸ್ವಾಮಿ ಶೀಘ್ರ ಗುಣಮುಖವಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೆಂಗಲ್ ಆಂಜನೇಯಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ 101 ಈಡುಗಾಯಿ ಒಡೆದಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಲಘುವಾದ ಸ್ಟ್ರೋಕ್ ಆಗಿದ್ದು, ಮಿದುಳಿನ ಎಡಭಾಗದಲ್ಲಿ ತೊಂದರೆ ಉಂಟಾಗಿ ಶರೀರದ ಬಲಭಾಗಕ್ಕೆ ಸಮಸ್ಯೆ ಆಗಿತ್ತು. ಈಗ ಎಲ್ಲ ಸರಿಯಾಗಿದೆ. ಚಿಕಿತ್ಸೆ ಮುಂದುವರಿದಿದ್ದು, ಚೆನ್ನಾಗಿ ಮಾತು ಕೂಡ ಆಡುತ್ತಿದ್ದಾರೆ. ಹೃದಯ ಬಡಿತ, ರಕ್ತದೊತ್ತಡ ಎಲ್ಲವೂ ಉತ್ತಮವಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಡಾ.ಸತೀಶ್​ಚಂದ್ರ ಸಂಜೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ