ರಾಮನಗರದಲ್ಲಿ ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

Edited By:

Updated on: Oct 01, 2026 | 7:27 PM

ಮುಖ್ಯಾಂಶಗಳು

  • ರಾಮನಗರದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ ವಿಕಲಚೇತನರ ಪ್ರತಿಭಟನೆ
  • ಇಂದು ಪ್ರತಿಭಟನಾ ಸ್ಥಳಕ್ಕೆ ಆರ್​ ಅಶೋಕ್​ ಭೇಟಿ
  • ಮಳೆಯಲ್ಲೇ ಪ್ರತಿಭಟನಕಾರರ ಅಹವಾಲು ಆಲಿಸಿದ ವಿಪಕ್ಷ ನಾಯಕ

ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ವಿಶೇಷಚೇತನರ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಬೆಂಬಲ ಸೂಚಿಸಿದರು. ಮಳೆ ನಡುವೆ ಹೋರಾಟ ನಡೆಸುತ್ತಿರುವ ವಿಕಲಚೇತನರು ಕಾಯಂ ಉದ್ಯೋಗ, ಮಾಶಾಸನ ಹೆಚ್ಚಳ ಮತ್ತು ಬಾಕಿ ಬಿಡುಗಡೆಗೆ ಆಗ್ರಹಿಸಿದರು. ನಮಗೆ ನ್ಯಾಯ ಒದಗಿಸದಿದ್ದರೆ ದಯಾಮರಣಕ್ಕೆ ಅವಕಾಶ ಕಲ್ಪಿಸುವಂತೆ ಆರ್. ಅಶೋಕ್​ಗೆ ಮನವಿ ಮಾಡಿದರು.

ರಾಮನಗರ, ಅಕ್ಟೋಬರ್​​ 01: ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ವಿಕಲಚೇತನರು ಕಳೆದ ಹನ್ನೆರಡು ದಿನಗಳಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನೆ ಸ್ಥಳಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್​ ಭೇಟಿ ನೀಡಿದರು. ಮಳೆ ಬರುತ್ತಿದ್ದರೂ ಲೆಕ್ಕಿಸದೆ ವಿಕಲಚೇತನರು ಪ್ರತಿಭಟಿಸುತ್ತಿದ್ದು, ಆರ್. ಅಶೋಕ್ ಕೂಡ ಮಳೆಯಲ್ಲೇ ಪ್ರತಿಭಟನಕಾರರ ಅಹವಾಲುಗಳನ್ನು ಆಲಿಸಿದರು. ಪ್ರತಿಭಟನಕಾರರು ತಮ್ಮ ಪ್ರಮುಖ ಬೇಡಿಕೆಗಳಾದ ಕಾಯಂ ಉದ್ಯೋಗ, ಮಾಶಾಸನ ಹೆಚ್ಚಳ ಮತ್ತು ಕಳೆದ ಆರು ತಿಂಗಳಿಂದ ಬಾಕಿ ಇರುವ ಎಂಟು ಲಕ್ಷ ಜನರಿಗೆ ಮಾಶಾಸನ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More