ಕಲ್ಲು ಕ್ವಾರಿ ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ ಪರಮೇಶ್ವರ್

Updated on: Jul 02, 2026 | 11:35 AM

ಬೆಂಗಳೂರಿನ ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಬಂಡೆ ಕುಸಿದು ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟ ಘಟನೆ ರಾಜ್ಯದಲ್ಲಿ ತೀವ್ರ ಆಘಾತ ಮೂಡಿಸಿದೆ. ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದು, ತಮ್ಮ ಇಲಾಖೆಗೆ ಸಂಬಂಧಪಟ್ಟಿದ್ದರೆ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಮತ್ತು ಅಕ್ರಮ ಕ್ವಾರಿಗಳ ವಿರುದ್ಧ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅಕ್ರಮ ಗಣಿಗಾರಿಕೆಯನ್ನು ತಡೆಯಲು ಕಠಿಣ ಕ್ರಮದ ಭರವಸೆ ನೀಡಿದ್ದಾರೆ.

ಬೆಂಗಳೂರು, ಜುಲೈ 02: ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಬಿಹಾರ ಮೂಲದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದ ಪರಿಣಾಮ ಸಂಭವಿಸಿದ ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಅವರು, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಅಂಶವಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಘಟನೆ ಅಕ್ರಮವಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Jul 02, 2026 11:33 AM
Follow Us