ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

Updated on: Jan 01, 2026 | 3:57 PM

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದಲ್ಲಿ ಹೊಸ ವರ್ಷಾಚರಣೆಯ ಸಂಭ್ರಮದ ನಡುವೆ ವಾಮಾಚಾರದ ಘಟನೆ ಗ್ರಾಮಸ್ಥರಿಗೆ ಆಘಾತ ನೀಡಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು ಇಟ್ಟು ಪೂಜೆ ಮಾಡಿರುವುದನ್ನು ಕಂಡು ಗ್ರಾಮಸ್ಥರು ಭಯಗೊಂಡಿದ್ದಾರೆ. ಪೊಲೀಸರ ತನಿಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವಿಡಿಯೋ ನೋಡಿ.

ರಾಮನಗರ, ಜನವರಿ 01: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರಿಗೆ ಆಘಾತ ಎದುರಾಗಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು, ದೀಪ ಇಟ್ಟು ಪೂಜೆ ಮಾಡಲಾಗಿದೆ. ತಮಾಷೆಗೆ ಮಾಡಿದ್ದಾರಾ ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುವುದು ತಿಳಿದುಬಂದಿಲ್ಲ. ಸದ್ಯ ಇದರಿಂದಾಗಿ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಪೊಲೀಸ್​​ ತನಿಖೆಗೆ ಜನರು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

 

Published on: Jan 01, 2026 03:55 PM