AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ: ಜಾತಿ, ಧರ್ಮ ಭೇದವಿಲ್ಲದೆ ಮೆರವಣಿಗೆಯಲ್ಲಿ ಭಾಗಿ

ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ: ಜಾತಿ, ಧರ್ಮ ಭೇದವಿಲ್ಲದೆ ಮೆರವಣಿಗೆಯಲ್ಲಿ ಭಾಗಿ

ಸಂಜಯ್ಯಾ ಚಿಕ್ಕಮಠ
| Edited By: |

Updated on:Jun 27, 2026 | 9:19 PM

Share

ಮುಖ್ಯಾಂಶಗಳು

  • ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾದ ಕಲಘಟಗಿ ತಾಲೂಕಿನ ರಾಮನಾಳ
  • ಮುಸ್ಲಿಮರ ಜೊತೆ ಹಿಂದೂಗಳಿಂದಲೂ ಮೊಹರಂ ಹಬ್ಬದ ಆಚರಣೆ
  • ಜಾತಿ, ಧರ್ಮ ಭೇದವಿಲ್ಲದೆ ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗಿ

Dharwad News: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಹಿಂದೂ ಧರ್ಮೀಯರು ಸಂಭ್ರಮದಿಂದ ಆಚರಿಸಿದ್ದಾರೆ. ಹಿಂದೂಗಳೇ ಹೆಚ್ಚಾಗಿರುವ ಈ ಗ್ರಾಮದಲ್ಲಿ ಸರ್ವಧರ್ಮ ಸಮನ್ವಯತೆ ಕಾಣಸಿಕ್ಕಿದೆ. ಸಾವಿರಾರು ಜನರು ಅಲಾಯಿ ದೇವರ ಮೆರವಣಿಗೆಯಲ್ಲಿ ಭಾಗಿಯಾಗಿ, ಭಾವೈಕ್ಯತೆಯ ಸಂದೇಶ ಸಾರಿದ್ದಾರೆ. ಈ ಆಚರಣೆಯು ಧಾರ್ಮಿಕ ಸಹಿಷ್ಣುತೆಗೆ ಉತ್ತಮ ನಿದರ್ಶನವಾಗಿದೆ.

ಧಾರವಾಡ, ಜೂನ್​​ 26: ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ ಗ್ರಾಮವು ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಮೊಹರಂ ಹಬ್ಬವನ್ನು ಹಿಂದೂ ಧರ್ಮೀಯರೂ ಸಂಭ್ರಮದಿಂದ ಆಚರಿಸುವ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದ್ದಾರೆ. ಹಿಂದೂ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿರುವ ಈ ಗ್ರಾಮದಲ್ಲಿ, ಮೊಹರಂ ಹಬ್ಬದ ಆಚರಣೆಯು ಶತಮಾನಗಳಿಂದಲೂ ನಡೆದುಕೊಂಡು ಬಂದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ರಾಮನಾಳ ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಸಾವಿರಾರು ಜನರು, ಜಾತಿ, ಧರ್ಮ ಭೇದವಿಲ್ಲದೆ,  ಹಬ್ಬದಲ್ಲಿ ಭಾಗವಹಿಸಿದ್ದಾರೆ. ಅಲಾಯಿ ದೇವರನ್ನು ಡೋಲಿಯಲ್ಲಿ ಇಟ್ಟು, ಗ್ರಾಮದ ತುಂಬೆಲ್ಲಾ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 26, 2026 11:51 AM

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More