AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ

ಗೋಪಾಲ್​ ಸೋಮಯ್ಯ
| Edited By: |

Updated on: Sep 08, 2026 | 10:26 PM

Share

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ರಾಮಪುರಂ ಕುಟುಂಬ ತಮ್ಮ ಎಸ್ಟೇಟ್ ಕಾರ್ಮಿಕರ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುತ್ತಿದೆ. ಮೂಲಸೌಕರ್ಯ ವಂಚಿತ ಸರ್ಕಾರಿ ಶಾಲೆಗಳ ದುಃಸ್ಥಿತಿ ಅರಿತು, 2019ರಲ್ಲಿ ಈ ಕುಟುಂಬ ಸ್ವಂತ ಶಾಲೆಯೊಂದನ್ನು ಆರಂಭಿಸಿತು. ಇಲ್ಲಿ ಮಕ್ಕಳಿಗೆ ಸಮವಸ್ತ್ರ, ಊಟ ಸೇರಿದಂತೆ ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಉಚಿತವಾಗಿ ಲಭ್ಯವಿದೆ.

ಮಡಿಕೇರಿ, ಸೆಪ್ಟೆಂಬರ್​ 08: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ರಾಮಪುರಂ ಕುಟುಂಬ ಕೈಗೊಂಡಿರುವ ಶೈಕ್ಷಣಿಕ ಕಾರ್ಯ ನಿಜಕ್ಕೂ ಮಾದರಿ. ತಮ್ಮ ತೋಟದ ಕೆಲಸಕ್ಕೆ ಬರುವ ನೂರಾರು ಕಾರ್ಮಿಕರ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿದ ಈ ಕುಟುಂಬ, ಅವರಿಗೆ ಉತ್ತಮ ಶಿಕ್ಷಣ ನೀಡಲು ನಿರ್ಧರಿಸಿದೆ. ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯಗಳ ಕೊರತೆ ಮತ್ತು ಶಿಕ್ಷಣದ ಗುಣಮಟ್ಟದ ಇಳಿಮುಖ, ಹಾಗೂ ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದಾಗಿ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಈ ಕುಟುಂಬ ಮುಂದೆ ಬಂದಿದೆ. 2019ರಲ್ಲಿ ರಾಮಪುರಂ ಕುಟುಂಬ ತಮ್ಮದೇ ಆದ ಖಾಸಗಿ ಶಾಲೆಯನ್ನು ಸ್ಥಾಪಿಸಿತು. ಈ ಶಾಲೆಯಲ್ಲಿ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಲಾಗುತ್ತದೆ. ಸಮವಸ್ತ್ರ, ಊಟ, ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಎಲ್ಲವೂ ಇಲ್ಲಿ ಉಚಿತ.
ಮನೆಯಂತಹ ವಾತಾವರಣದಲ್ಲಿ ಮಕ್ಕಳು ಕಲಿಯಬೇಕು ಎಂಬ ಉದ್ದೇಶದಿಂದ ಶಾಲೆ ಕಟ್ಟಡವನ್ನು ಮನೆಯ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಪ್ರೀ-ಕೆಜಿ, ಎಲ್ ಕೆಜಿ, ಯುಕೆಜಿ ತರಗತಿಗಳಲ್ಲಿ ಸುಮಾರು 90 ಮಕ್ಕಳು ಶಿಕ್ಷಣ ಪಡೆದುಕೊಳ್ಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us