ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು

ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು

ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 16, 2024 | 9:45 PM

ನಟ ದರ್ಶನ್ ಮತ್ತು ಸಹಚರರಿಂದ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ರಂಭಾಪುರಿ ಪೀಠದ ಜಗದ್ಗುರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಅಮಾನವೀಯ ಘಟನೆ. ಯಾವುದೇ ಪಕ್ಷದ ಸರ್ಕಾರವಿರಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಬೇಕು. ಈ ರೀತಿಯಲ್ಲಿ ಹತ್ಯೆ, ಸಮಾಜ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಚಿತ್ರದುರ್ಗ, ಜೂನ್​ 16: ನಟ ದರ್ಶನ್ (Darshan) ಮತ್ತು ಸಹಚರರಿಂದ ಕೊಲೆಯಾದ ರೇಣುಕಾಸ್ವಾಮಿ ಮನೆಗೆ ರಂಭಾಪುರಿ ಪೀಠದ ಜಗದ್ಗುರುಗಳು (Rambhapuri Shri) ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕೊಲೆ ಅಮಾನವೀಯ ಘಟನೆ. ಇತ್ತೀಚೆಗೆ ರಾಜ್ಯದಲ್ಲಿ ಕೊಲೆ ಘಟನೆಗಳು ಬಹಳಷ್ಟು ನಡೆಯುತ್ತಿವೆ. ಯಾವುದೇ ಪಕ್ಷದ ಸರ್ಕಾರವಿರಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಕೊಲೆ ಕೇಸ್​ನಲ್ಲಿ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆಗೆ ಪಾತ್ರವಾಗಿದೆ. ರೇಣುಕಾಸ್ವಾಮಿ ಕುಟುಂಬ ಕಣ್ಣೀರ ಕಡಲಲ್ಲಿದೆ. ಹೀಗಾಗಿ ಕೊಲೆಯಾದ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಬೇಕು. ಸಿನಿಮೀಯ ರೀತಿಯಲ್ಲಿ ಹತ್ಯೆ, ಸಮಾಜ ತಲೆತಗ್ಗಿಸುವ ಸ್ಥಿತಿ ನಿರ್ಮಾಣವಾಗಿದೆ. ನೇಹಾ ಮತ್ತು ಅಂಜಲಿ ಅಮಾಯಕ ಜೀವಗಳು ಬಲಿ ಆಗಿದ್ದು ದುರದೃಷ್ಟಕರ. ಮಾನವ ಕುಲಕೋಟಿಗೆ ವ್ಯಥೆ ಆಗಿದೆ, ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.