ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್

Updated on: Sep 21, 2024 | 10:02 PM

Ramesh Arvind: ರಾಧಿಕಾ ಕುಮಾರಸ್ವಾಮಿ ನಟನೆಯ ‘ಭೈರಾದೇವಿ’ ಸಿನಿಮಾದ ಟ್ರೈಲರ್ ಬಿಡಗುಡೆ ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ ಕಣ್ಣಲ್ಲಿ ನಾಗವಲ್ಲಿಯ ಹೊಳಪು ಕಂಡಿದ್ದಾಗಿ ಹೇಳಿದ್ದಾರೆ.

ರಾಧಿಕಾ ಕುಮಾರಸ್ವಾಮಿ ನಟಿಸಿರುವ ‘ಭೈರಾದೇವಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇಂದು (ಸೆಪ್ಟೆಂಬರ್ 21) ನಡೆಯಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ರಮೇಶ್ ಅರವಿಂದ್ ‘ಭೈರಾದೇವಿ’ ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ರಾಧಿಕಾ ಕಾಳಿ ಮೇಕಪ್​ನಲ್ಲಿದ್ದರೆ ಮೇಕಪ್ ತೆಗೆದು ಬನ್ನಿ ಎನ್ನುತ್ತಿದ್ದೆ. ‘ಆಪ್ತಮಿತ್ರ’ ಸಮಯದಲ್ಲಿ ಸೌಂದರ್ಯಾಗೂ ನಾನು ಹಾಗೇ ಹೇಳುತ್ತಿದ್ದೆ. ನಾಗವಲ್ಲಿ ರೀತಿಯ ಹೊಳಪು ನನಗೆ ರಾಧಿಕಾ ಕಣ್ಣಲ್ಲೂ ಕಾಣಿಸಿತು ಎಂದರು. ‘ಭೈರಾದೇವಿ’ ಸಿನಿಮಾದಲ್ಲಿ ರಮೇಶ್ ಅರವಿಂದ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪರಲೋಕದ ಜೀವಿಯೊಂದರಿಂದ ಸಮಸ್ಯೆಗೆ ಸಹ ತುತ್ತಾಗುತ್ತಾರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More