AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ್ಟ್ಮೆಂಟ್​ನಲ್ಲಿ ಪತ್ನಿನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಜಂಟಿ ಪೊಲೀಸ್ ಆಯುಕ್ತ

ಅಪಾರ್ಟ್ಮೆಂಟ್​ನಲ್ಲಿ ಪತ್ನಿನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಜಂಟಿ ಪೊಲೀಸ್ ಆಯುಕ್ತ

ರಮೇಶ್ ಬಿ. ಜವಳಗೇರಾ
|

Updated on: Feb 18, 2026 | 5:46 PM

Share

ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ಪತ್ನಿಯನ್ನೇ(Wife) ಕೊಲೆ ಮಾಡಿದ ಘಟನೆ ಬೆಂಗಳೂರು (Bengaluru) ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ (75), ನಾನು ಸತ್ತರೆ ನಿನ್ನ ನೋಡಿಕೊಳ್ಳುವವರು ಯಾರು ಎಂದು ಪತ್ನಿ ಸಂಧ್ಯಾಳನ್ನು ಟವಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು ಇರುವುದಿಲ್ಲ ಎಂದು ತೀರ್ಮಾನಿಸಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರು, (ಫೆಬ್ರವರಿ 18): ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ಪತ್ನಿಯನ್ನೇ(Wife) ಕೊಲೆ ಮಾಡಿದ ಘಟನೆ ಬೆಂಗಳೂರು (Bengaluru) ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ (75), ನಾನು ಸತ್ತರೆ ನಿನ್ನ ನೋಡಿಕೊಳ್ಳುವವರು ಯಾರು ಎಂದು ಪತ್ನಿ ಸಂಧ್ಯಾಳನ್ನು ಟವಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು ಇರುವುದಿಲ್ಲ ಎಂದು ತೀರ್ಮಾನಿಸಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ಈ ಬಗ್ಗೆ ಪೂರ್ವ ವಲಯ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯಿಸಿದ್ದು, ಸಂಧ್ಯಾಶ್ರೀ ಅವರ ಮನೆಯ ಅಡುಗೆ ಮನೆಯಲ್ಲಿ ಇದ್ದಾಗ ಕೃತ್ಯ ನಡೆಸಲಾಗಿದೆ. ಇಂದು (ಫೆಬ್ರವರಿ 18) ಬೆಳಗ್ಗೆ ಹತ್ತು ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ.ನಾಗೇಶ್ವರ ರಾವ್ ಅವರು ಟವಲ್ ಬಳಸಿ ಹಿಂದಿನಿಂದ ಹೋಗಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಅದೇ ಅಪಾರ್ಟ್ಮೆಂಟ್ ನಲ್ಲಿ ವಾಸ ಮಾಡುವ ಒರ್ವರಿಗೆ ಕರೆ ಮಾಡಿ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ. ಬಳಿಕ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಅಪಾರ್ಟ್ಮೆಂಟ್ ನಲ್ಲಿ ಇರುವ ವೈದ್ಯರೂ ಪರಿಶೀಲನೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ಅನ್ವಯ ಕೇಸ್ ದಾಖಲು ಮಾಡಿ ನಾಗಲೇಶ್ವರ ರಾವ್ ಅವರನ್ನ ಬಂಧನ ಮಾಡಲಾಗಿದೆ. ಆರೋಪಿ ವಿಚಾರಣೆ ವೇಳೆ ಸರಿಯಾದ ಮಾಹಿತಿ ನೀಡುತ್ತಿಲ್ಲ. ಆರೋಪಿತ ಸಹ ಮಾನಸಿಕ ಅಸ್ವಸ್ಥತೆ ಇರುವಂತೆ ಕಂಡು ಬರುತ್ತಿದೆ. ಸದ್ಯ ತನಿಖೆ ಮುಂದುವರೆಸಲಾಗಿದ್ದು, ಕೃತ್ಯಕ್ಕೆ ನಿಖರವಾದ ಕಾರಣ ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ: ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ