ಹೆಚ್ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ; ಮೈತ್ರಿಯಿಂದ ಇನ್ನಷ್ಟು ಶಕ್ತಿ ಬರಲಿದೆ ಎಂದರು
ಜೆಡಿಎಸ್, ಬಿಜೆಪಿ ಮೈತ್ರಿ ಚರ್ಚೆ ಬೆನ್ನಲ್ಲೇ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ಹೆಚ್ಡಿ ಕುಮಾರಸ್ವಾಮಿ ಜೊತೆ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದರು. ಸದ್ಯ ಭೇಟಿ ಬಳಿಕ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದೆ ಎಂದರು.
ಬೆಂಗಳೂರು, ಸೆ.18: ಜೆಡಿಎಸ್, ಬಿಜೆಪಿ ಮೈತ್ರಿ ಚರ್ಚೆ ಬೆನ್ನಲ್ಲೇ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ. ಕಮಲ ದಳ ಮೈತ್ರಿ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು. ಸುಮಾರು ಅರ್ಧ ಗಂಟೆಗಳ ಕಾಲ ಹೆಚ್ಡಿ ಕುಮಾರಸ್ವಾಮಿ ಜೊತೆ ರಮೇಶ್ ಜಾರಕಿಹೊಳಿ ಮಾತುಕತೆ ನಡೆಸಿದರು. ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಭೇಟಿ ಬಳಿಕ ಶಾಸಕ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಹೆಚ್.ಡಿ.ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದೆ ಎಂದರು. ಒಳ್ಳೆದಾಗಲಿ ಎಂದು ಹಾರೈಸಿದ್ದೇನೆ. ಹೈಕಮಾಂಡ್ ನಿರ್ಧಾರಕ್ಕೆ ಸ್ವಾಗತ. ಆದಷ್ಟು ಬೇಗ ಮೈತ್ರಿ ಆದರೆ ಒಳ್ಳೆಯದು. ರಾಜ್ಯದ ಕೆಟ್ಟ ಸರ್ಕಾರ ತೆಗೆಯಲು ಮುಂದಿನ ದಿನಗಳಲ್ಲಿ ಹೋರಾಟ ಮಾಡಲು ಕುಮಾರಸ್ವಾಮಿ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿಯಿಂದ ಇನ್ನಷ್ಟು ಶಕ್ತಿ ಬರಲಿದೆ. ಮೈತ್ರಿ ಆದರೆ ಹೈಕಮಾಂಡ್ ನಿರ್ಧಾರಕ್ಕೆ ಒಪ್ಪಿಗೆ ಇದೆ. ಈಗ ಹೇಳೋಕೆ ಆಗಲ್ಲ ಎಂದರು.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ