ರಮೇಶ್ ಜಾರಕಿಹೊಳಿ ತಮ್ಮ ನೋವುಗಳನ್ನು ಹೇಳಿಕೊಂಡಿದ್ದಾರೆ, ಅವುಗಳನ್ನು ಬಗೆಹರಿಸುತ್ತೇವೆ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ರಾಜ್ಯ ಬಿಜೆಪಿಯ ಉದ್ದೇಶ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸುವುದಾಗಿದ್ದು ಆ ಕಾರ್ಯದಲ್ಲಿ ಕೈ ಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅತಿಹೆಚ್ಚು ಸ್ಥಾನಗಳನ್ನು ಗೆದ್ದಿಕೊಡುವ ನಿಟ್ಟಿನಲ್ಲಿ ಶ್ರಮಿಸುವ ಭರವಸೆ ರಮೇಶ್ ಜಾರಕಿಹೊಳಿ ನೀಡಿರುವರೆಂದು ವಿಜಯೇಂದ್ರ ಹೇಳಿದರು.
ಬೆಂಗಳೂರು: ಅಸಮಾಧಾನಗೊಂಡಿರುವ ಬಿಜೆಪಿ ನಾಯಕರನ್ನು ಭೇಟಿಯಾಗಿ ಅವರಿಗಿರುವ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಶುರುಮಾಡಿದ್ದಾರೆ. ಗುರುವಾರ ಬೆಳಗ್ಗೆ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯನ್ನು (Ramesh Jarkiholi) ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಭೇಟಿಯಾಗಿ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿಜಯೇಂದ್ರ, ಅವರ ನಡೆಯ ಬಗ್ಗೆ ಚರ್ಚೆಗಳು ನಡೆಯುತ್ತಿದ್ದವು ಮತ್ತು ಅವರು ಕೂಡ ಅಸಮಾಧಾನ ಪ್ರಕಟಿಸಿದ್ದರು. ಪಕ್ಷದ ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದು ತಮ್ಮ ಮೇಲಿರುವ ಜವಾಬ್ದಾರಿಯಾಗಿರುವುದರಿಂದ ಅವರ ಸಮಸ್ಯೆಗಳ ಬಗ್ಗೆ ಕೇಳಿದ್ದಾಗಿ ಹೇಳಿದರು. ಅವರು ತಮ್ಮ ನೋವು ಮತ್ತು ವಿಚಾರಗಳನ್ನು ಹೇಳಿಕೊಂಡಿದ್ದು ಅವುಗಳ ಕಡೆ ಗಮನ ನೀಡಲಾಗುವುದು ಎಂದ ಅವರು ರಾಜ್ಯ ಬಿಜೆಪಿಯ ಉದ್ದೇಶ ಪ್ರಧಾನಮಂತ್ರಿ ನರೇಂದ್ರ ಮೋದಿಯವರ (PM Narendra Modi) ಕೈ ಬಲಪಡಿಸುವುದಾಗಿದ್ದು ಆ ಕಾರ್ಯದಲ್ಲಿ ಕೈ ಜೋಡಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅತಿಹೆಚ್ಚು ಸ್ಥಾನಗಳನ್ನು ಗೆದ್ದಿಕೊಡುವ ನಿಟ್ಟಿನಲ್ಲಿ ಶ್ರಮಿಸುವ ಭರವಸೆ ನೀಡಿರುವರೆಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ