ಸ್ಟಿಂಗ್​​ ಆಪರೇಷನ್​​ ಹಲ್​​ಚಲ್​​ ನಡುವೆ ಸಿದ್ದರಾಮಯ್ಯರನ್ನು ಭೇಟಿಯಾದ ರಮೇಶ್​ ಜಾರಕಿಹೊಳಿ: ಮಾತುಕತೆ ಬಗ್ಗೆ ಹೆಚ್ಚಿದ ಕುತೂಹಲ

Edited By:

Updated on: Oct 14, 2026 | 2:35 PM

ಕರ್ನಾಟಕದಲ್ಲಿ ಸ್ಟಿಂಗ್ ಕಾರ್ಯಾಚರಣೆ ವಿವಾದದ ಬಿಸಿ ತೀವ್ರಗೊಂಡಿರುವ ನಡುವೆಯೇ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಮೈಸೂರಿನ ಕುವೆಂಪು ನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಈ ಮಹತ್ವದ ಭೇಟಿ ನಡೆದಿದ್ದು, ಇಬ್ಬರು ನಾಯಕರು ಮಹತ್ವದ ಮಾತುಕತೆ ನಡೆಸಿದ್ದಾರೆ. ಕೆಲ ನಿಮಿಷಗಳ ಕಾಲ ನಡೆದ ಈ ಚರ್ಚೆ ರಾಜಕೀಯ ವಲಯದಲ್ಲಿ ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರು, ಅಕ್ಟೋಬರ್​​ 14: ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸ್ಟಿಂಗ್​​ ಆಪರೇಷನ್​​ ವಿಡಿಯೋ ಸಂಬಂಧ ಮಾಧ್ಯಮಗಳ ಮೇಲೆ ಮಾಜಿ ಸಿಎಂ ನಿರ್ಬಂಧಕಾಜ್ಞೆ ತಂದಿರುವ ಬೆನ್ನಲ್ಲೇ ಮೈಸೂರಿನ ಟಿ.ಕೆ.ಲೇಔಟ್​ನಲ್ಲಿರುವ ಸಿದ್ದರಾಮಯ್ಯ ನಿವಾಸದಲ್ಲಿ ನಡೆದಿರುವ ಈ ಭೇಟಿ ಭಾರಿ ಕುತೂಹಲ ಮೂಡಿಸಿದೆ. ಇನ್ನು ಮಾಜಿ ಸಿಎಂ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ರಮೇಶ್ ಜಾರಕಿಹೊಳಿ, ಸ್ಟಿಂಗ್​ ವಿಚಾರವಾಗಿ ಸಿದ್ದರಾಮಯ್ಯ ಸ್ಟೇ ತೆಗೆದುಕೊಳ್ಳಬಾರದಿತ್ತು. ಈ ವಿಚಾರವಾಗಿ ಫೈಟ್​ ಮಾಡಬೇಕಿತ್ತು ಎಂದಿದ್ದಾರೆ. ಸ್ಟಿಂಗ್​ ಆಪರೇಷನ್​ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಬೇರೆ ವಿಚಾರ ಮಾತನಾಡಲು ಸಿದ್ದರಾಮಯ್ಯ ಭೇಟಿಗೆ ಬಂದಿದ್ದೆ. ಸಿದ್ದರಾಮಯ್ಯ ಯಾವ ಪಕ್ಷದಲ್ಲಿದ್ರೂ, ಅವರು ನಮ್ಮ ನಾಯಕ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 14, 2026 02:24 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More