ರಮೇಶ್ ಜಾರಕಿಹೊಳಿ ಮಾತಾಡಿದ್ದನ್ನೆಲ್ಲ ಪಕ್ಷದ ವರಿಷ್ಠರಿಗೆ ವರದಿ ಮಾಡಿಯಾಗಿದೆ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Jan 16, 2025 | 6:00 PM

ಕೇಂದ್ರ ಬಿಜೆಪಿ ಶಿಸ್ತು ಸಮಿತಿಯು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕಡಿವಾಣ ಹಾಕಿದ ಬಳಿಕ ಅವರ ಬದಲಿಗೆ ರಮೇಶ್ ಜಾರಕಿಹೊಳಿ ವಿಜಯೇಂದ್ರ ಮತ್ತು ಯಡಿಯೂರಪ್ಪರನ್ನು ತೆಗಳುವ ಕಾರ್ಯ ಶುರುಮಾಡಿದಂತಿದೆ. ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಬಿಜೆಪಿ ಸೇರಿ ಮಿನಿಸ್ಟ್ರಾಗಿದ್ದು ಹಳೆಯ ವಿಚಾರ. ಅವರು ಎಷ್ಟು ಆಳವಾಗಿ ಮತ್ತು ಭದ್ರವಾಗಿ ಬಿಜೆಪಿಯಲ್ಲಿ ಕಾಲೂರಿದ್ದಾರೆ ಅನ್ನೋದು ಚರ್ಚೆಯ ವಿಚಾರ.

ಬೆಂಗಳೂರು: ರಮೇಶ್ ಜಾರಕಿಹೊಳಿ ನಿನ್ನೆ ಬೆಳಗಾವಿಯಲ್ಲಿ ವಿಜಯೇಂದ್ರ ಮತ್ತು ಬಿಎಸ್ ಯಡಿಯೂರಪ್ಪ ಬಗ್ಗೆ ಮಾತಾಡಿದ್ದು ಬಿಜೆಪಿ ಪ್ರಮುಖ ನಾಯಕರನ್ನು ವ್ಯಗ್ರರನ್ನಾಗಿಸಿದೆ.. ಇವತ್ತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಅರ್ ಅಶೋಕ, ಪಕ್ಷದ ಶಿಸ್ತಿನ ಸಿಪಾಯಿ ಅಗಿರುವ ತಾನು ಪಕ್ಷದ ಚೌಕಟ್ಟಿನೊಳಗೆ ಮಾತಾಡುತ್ತೇನೆ, ತನಗೆ ಕಂಡುಬಂದ ಎಲ್ಲ ವಿದ್ಯಮಾನಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ, ನಿರ್ಧಾರ ಅವರು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಸಿದ್ದರಾಮಯ್ಯಗೆ ಜಾತಿ ಜನಗಣತಿ ನೆನಪಾಗುತ್ತೆ: ಆರ್​ ಅಶೋಕ್​

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.