ಹೈಕಮಾಂಡ್ ನಾಯಕರಿಂದ ನಮಗೆ ಶಹಭಾಸ್ಗಿರಿ ಸಿಕ್ಕಿದೆ: ರಮೇಶ್ ಜಾರಕಿಹೊಳಿ
ಕರ್ನಾಟಕ ಬಿಜೆಪಿ ಆಂತರಿಕ ಸಂಘರ್ಷ ತೀವ್ರಗೊಳ್ಳುತ್ತಿರುವ ಮಧ್ಯೆಯೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆ ಬಗ್ಗೆ ಅವರು ನೀಡಿರುವ ಮಾಹಿತಿ ಇಲ್ಲಿದೆ. ಹೆಚ್ಚಿನ ವಿವರಗಳಿಗೆ ವಿಡಿಯೋ ನೋಡಿ.
ನವದೆಹಲಿ, ಫೆಬ್ರವರಿ 4: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರನ್ನು ಸೋಮವಾರ ರಾತ್ರಿಯೇ ಭೇಟಿ ಮಾಡಿದೆವು. ದೆಹಲಿ ಮಟ್ಟದ ನಾಯಕರಿಂದ ನಮಗೆ ಶಹಭಾಸ್ಗಿರಿ ಸಿಕ್ಕಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು. ದೆಹಲಿಯಲ್ಲಿ ಮಾತನಾಡಿದ ಅವರು, ಅಧ್ಯಕ್ಷರ ರೀತಿಯಲ್ಲಿ ಹತಾಶ ಭಾವನೆಯಲ್ಲಿ ಮಾತನಾಡುವುದಿಲ್ಲ. ಎಲ್ಲ ವಿಚಾರಗಳನ್ನು ಹೈಕಮಾಂಡ್ ಬಳಿ ಮನವರಿಕೆ ಮಾಡಿದ್ದೇವೆ. ಅಂತಿಮವಾಗಿ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಲೆಬಾಗುತ್ತೇವೆ ಎಂದರು.
ಅಂತಿಮ ಹಂತದ ಚರ್ಚೆ ಹಿನ್ನೆಲೆ ನಾವು ಹೆಚ್ಚು ಮಾತನಾಡುವುದಿಲ್ಲ. ಅವರು (ಹೈಕಮಾಂಡ್) ಏನು ನಿರ್ಧಾರ ತೆಗೆದುಕೊಳ್ಳುತ್ತಾರೆಯೋ ಅದನ್ನು ತಲೆಬಾಗಿ ಸ್ವೀಕಾರ ಮಾಡುತ್ತೇವೆ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕರ್ಮಕಾಂಡ ಬಿಚ್ಚಿಡುವ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆ, ಆ ಬಗ್ಗೆ ಅವರನ್ನೇ ಕೇಳಿ ಎಂದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Feb 04, 2025 11:47 AM