ತಮ್ಮನ್ನು ಕೋಟ್ಯಾಂತರ ರೂಪಾಯಿಗಳಿಗೆ ಮಾರಿಕೊಂಡಿರುವ ರಮೇಶ್ ಜಾರಕಿಹೊಳಿ ಭ್ರಷ್ಟಾಚಾರದ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ: ಲಕ್ಷ್ಮಿ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಅವರಿಂದಾಗಿ ರೈತನೊಬ್ಬ ಅತ್ಮಹತ್ಯೆ ಮಾಡಿಕೊಂಡಿದ್ದನ್ನು ಅವರು ಮರೆತಿರಬಹುದು ಆದರೆ ತಾವು ಮರೆತಿಲ್ಲ ಎಂದು ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನಡುವೆ ಇರುವ ರಾಜಕೀಯ ವೈರತ್ವ ಬೇರೆ ಗ್ರಹದ ಜೀವಿಗಳಿಗೂ ಗೊತ್ತಾಗಿರಬಹು! ಪ್ರಜಾಧ್ವನಿ ಯಾತ್ರೆ (Prajadhavni Yatre) ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಅಯೋಜಿಸಲಾದ ಸಮಾವೇಶದಲ್ಲಿ ಮಾತಾಡಿದ ಲಕ್ಷ್ಮಿ ಅವರು ರಮೇಶ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರೈತರಿಗೆ ಕಬ್ಬು ಬಿಲ್ ಬಾಕಿ ಉಳಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರಲು ತಮ್ಮನ್ನು ತಾವು ಕೋಟ್ಯಾಂತರ ರೂಪಾಯಿಗಳಿಗೆ ಮಾರಿಕೊಂಡವರು ತನಗೆ ಭ್ರಷ್ಟಾಚಾರದ ಪಾಠ ಹೇಳಲು ಬರುತ್ತಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಅವರಿಂದಾಗಿ ರೈತನೊಬ್ಬ ಅತ್ಮಹತ್ಯೆ ಮಾಡಿಕೊಂಡಿದ್ದನ್ನು ಅವರು ಮರೆತಿರಬಹುದು ಆದರೆ ತಾವು ಮರೆತಿಲ್ಲ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಚ್ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು

ಟೈಲರ್ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
