ತಮ್ಮನ್ನು ಕೋಟ್ಯಾಂತರ ರೂಪಾಯಿಗಳಿಗೆ ಮಾರಿಕೊಂಡಿರುವ ರಮೇಶ್ ಜಾರಕಿಹೊಳಿ ಭ್ರಷ್ಟಾಚಾರದ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ: ಲಕ್ಷ್ಮಿ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Mar 01, 2023 | 3:51 PM

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಅವರಿಂದಾಗಿ ರೈತನೊಬ್ಬ ಅತ್ಮಹತ್ಯೆ ಮಾಡಿಕೊಂಡಿದ್ದನ್ನು ಅವರು ಮರೆತಿರಬಹುದು ಆದರೆ ತಾವು ಮರೆತಿಲ್ಲ ಎಂದು ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನಡುವೆ ಇರುವ ರಾಜಕೀಯ ವೈರತ್ವ ಬೇರೆ ಗ್ರಹದ ಜೀವಿಗಳಿಗೂ ಗೊತ್ತಾಗಿರಬಹು! ಪ್ರಜಾಧ್ವನಿ ಯಾತ್ರೆ (Prajadhavni Yatre) ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಅಯೋಜಿಸಲಾದ ಸಮಾವೇಶದಲ್ಲಿ ಮಾತಾಡಿದ ಲಕ್ಷ್ಮಿ ಅವರು ರಮೇಶ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರೈತರಿಗೆ ಕಬ್ಬು ಬಿಲ್ ಬಾಕಿ ಉಳಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರಲು ತಮ್ಮನ್ನು ತಾವು ಕೋಟ್ಯಾಂತರ ರೂಪಾಯಿಗಳಿಗೆ ಮಾರಿಕೊಂಡವರು ತನಗೆ ಭ್ರಷ್ಟಾಚಾರದ ಪಾಠ ಹೇಳಲು ಬರುತ್ತಾರೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಅವರಿಂದಾಗಿ ರೈತನೊಬ್ಬ ಅತ್ಮಹತ್ಯೆ ಮಾಡಿಕೊಂಡಿದ್ದನ್ನು ಅವರು ಮರೆತಿರಬಹುದು ಆದರೆ ತಾವು ಮರೆತಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 01, 2023 03:50 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.