Karnataka Assembly Polls: ಅಥಣಿಯಲ್ಲಿ ಲಕ್ಷ್ಮಣ ಸವದಿಯನ್ನು ರಾಜಕೀಯವಾಗಿ ಮುಗಿಸಲು ರಮೇಶ್ ಜಾರಕಿಹೊಳಿ ಪಣ

ಅರುಣ್​ ಕುಮಾರ್​ ಬೆಳ್ಳಿ

Updated on: Apr 26, 2023 | 10:30 AM

ಸವದಿಯವರು ಡಿಸಿಸಿ ಬ್ಯಾಂಕಿನ ನಿರ್ದೇಶಕರಲ್ಲಿ ಒಬ್ಬರಾಗಿದ್ದು ಅವರನ್ನು ಅಲ್ಲಿಂದಲೂ ಕೆಳಗಿಳಿಸುವುದಾಗಿ ರಮೇಶ್ ಆವೇಶದಿಂದ ಹೇಳಿದರು.

ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಮೊನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿ ಅದೇ ಪಕ್ಷದಿಂದ ಆಥಣಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಲಕ್ಷ್ಮಣ ಸವದಿ (Laxman Savadi) ನಡುವಿನ ರಾಜಕೀಯ ವೈರತ್ವ ಪರಾಕಷ್ಠೆ ತಲುಪಿದೆ. ಅಥಣಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ (Mahesh Kumatalli) ಪರ ಪ್ರಚಾರ ಮಾಡಿದ ಸಾಹುಕಾರ್ ಜಾರಕಿಹೊಳಿ ಸವದಿಯನ್ನು ರಾಜಕೀಯವಾಗಿ ಮಟ್ಟ ಹಾಕುವ ಶಪಥ ಮಾಡಿದರು. ಸವದಿಯವರು ಡಿಸಿಸಿ ಬ್ಯಾಂಕಿನ ನಿರ್ದೇಶಕರಲ್ಲಿ ಒಬ್ಬರಾಗಿದ್ದು ಅವರನ್ನು ಅಲ್ಲಿಂದಲೂ ಕೆಳಗಿಳಿಸುವುದಾಗಿ ರಮೇಶ್ ಆವೇಶದಿಂದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.