ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ

|

Updated on: Sep 10, 2024 | 3:58 PM

ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಛೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ಐಸಿಸ್‌ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಆಘಾತಕಾರಿ ಸಂಗತಿ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಪೊಲೀಸ್​ ಭದ್ರತೆ ಹೆಚ್ಚಿಸಲಾಗಿದೆ.

ಬೆಂಗಳೂರು, (ಸೆಪ್ಟೆಂಬರ್ 10): ಸ್ಫೋಟಕ್ಕೆ ಉಗ್ರರ ಸಂಚು ರೂಪಿಸಿದ ವಿಚಾರ ರಾಷ್ಟ್ರೀಯ ತನಿಖಾ ದಳ (NIA) ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾದ ಬೆನ್ನಲ್ಲೇ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಪೊಲೀಸ್​ ಭದ್ರತೆ ಹೆಚ್ಚಿಸಲಾಗಿದೆ. ಅಯೋಧ್ಯೆಯಲ್ಲಿ ಬಾಲ ಶ್ರೀರಾಮದೇವರ ಪ್ರಾಣ ಪ್ರತಿಷ್ಠಾಪನೆ ದಿನವೇ ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ಐಸಿಸ್‌ ಶಂಕಿತ ಉಗ್ರರು ರೂಪಿಸಿದ್ದರು ಎಂಬ ಶಾಕಿಂಗ್‌ ವಿಚಾರ ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಕಚೇರಿ ಎದುರು ಮೆಟಲ್ ಡಿಟೆಕ್ಟರ್ (Metal Detector) ಅಳವಡಿಕೆ ಮಾಡಲಾಗಿದೆ. ನಿತ್ಯ ಬಿಜೆಪಿ ಕಚೇರಿಗೆ ಮಲ್ಲೇಶ್ವರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌, ಸಬ್ ಇನ್ಸ್‌ಪೆಕ್ಟರ್‌ ಭೇಟಿ ಮಾಡಿ ಭದ್ರತೆ ಪರಿಶೀಲನೆ ಮಾಡಲಿದ್ದಾರೆ.