ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ: ಗೃಹ ಸಚಿವ ಮತ್ತು ಟಾಪ್ ಪೊಲೀಸ್ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಸಭೆ
ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಯ ಮಾಹಿತಿ ಮತ್ತು ಆತನ ಜತೆ ನಂಟಿರುವವರ ಬಗ್ಗೆಯೂ ಸಮಗ್ರ ಮಾಹಿತಿ ಕಲೆ ಹಾಕಬೇಕು ಎಂದು ಸಭೆಯಲ್ಲಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ನಿವಾಸ ಸೇರಿದಂತೆ ನಗರದ ಎಲ್ಲ ಪ್ರಮುಖ ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಬೆಂಗಳೂರು: ನಿನ್ನೆ ನಗರದ ಬ್ರೂಕ್ಫೀಲ್ಡ್ ಏರಿಯಾದಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram café bomb blast) ಪ್ರಕರಣನ್ನು ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಮತ್ತು ಕೂಲಂಕುಶ ತನಿಖೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಅದಕ್ಕೆ ಪೂರಕವಾಗಿ ಅವರು ಕಾವೇರಿ ನಿವಾಸದಲ್ಲಿ ಇಂದು ಮಧ್ಯಾಹ್ನ ಗೃಹ ಸಚಿವ ಜಿ ಪರಮೇಶ್ವರ್ (G Parameshwara), ರಾಜ್ಯದ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಕಮೀಶನರ್ ಬಿ ದಯಾನಂದ ಮತ್ತು ಇತರ ಕೆಲ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಅತ್ಯಂತ ಮಹತ್ವದ ಸಭೆಯೊಂದನ್ನು ನಡೆಸಿದರು. ಪೊಲೀಸ್ ಅಧಿಕಾರಿಗಳು ಕಾವೇರಿ ನಿವಾಸಕ್ಕೆ ಧಾವಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಲಭ್ಯವಿರುವ ಮಾಹಿತಿಯ ಪ್ರಕಾರ ಸಿದ್ದರಾಮಯ್ಯ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ವಿವರಗಳನ್ನು ಪಡೆದಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಯ ಮಾಹಿತಿ ಮತ್ತು ಆತನ ಜತೆ ನಂಟಿರುವವರ ಬಗ್ಗೆಯೂ ಸಮಗ್ರ ಮಾಹಿತಿ ಕಲೆ ಹಾಕಬೇಕು ಎಂದು ಸಭೆಯಲ್ಲಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ನಿವಾಸ ಸೇರಿದಂತೆ ನಗರದ ಎಲ್ಲ ಪ್ರಮುಖ ಮತ್ತು ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನೇರ ಹೊಣೆ: ಪ್ರಲ್ಹಾದ್ ಜೋಶಿ, ಕೇಂದ್ರ ಸಚಿವ