ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಇಂತಹ ಚಟುವಟಿಕೆಗಳ ಹಿಂದೆ ಬಿಜೆಪಿಯವ್ರ ಕೈವಾಡ ಇರತ್ತೆ; ಸಚಿವ ಚೆಲುವರಾಯಸ್ವಾಮಿ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ(Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, '. ಈ ಹಿಂದೆ ನಡೆದ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡ ಇದೆ. ರಾಮೇಶ್ವರಂ ಕೆಫೆ ಸ್ಫೋಟ ಕೇಸ್ನಲ್ಲಿ ಬಿಜೆಪಿ ಕೈವಾಡ ಇದೆ ಎಂದು ಹೇಳಲ್ಲ. ಈ ಹಿಂದೆ ಇಂತಹದ್ದೇ ಘಟನೆಗಳಾದಾಗ ಬಿಜೆಪಿಯ ಕೈವಾಡ ಇತ್ತು ಎಂದಿದ್ದಾರೆ.
ಬೆಂಗಳೂರು, ಮಾ.02: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ(Rameshwaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬ್ಯುಸಿನೆಸ್ಗೂ ಆಗಿರಬಹುದು ಎಂದು ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ(Cheluvaraya swamy )ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿಯವರಿಗೆ ಬರೀ ಹಿಂದೂ, ಮುಸ್ಲಿಮರು ಮಾತ್ರ ಕಾಣುತ್ತಿದ್ದಾರೆ. ಈ ಹಿಂದೆ ನಡೆದ ಹಲವು ಘಟನೆಗಳಲ್ಲಿ ಬಿಜೆಪಿಯವರ ಕೈವಾಡ ಇದೆ. ರಾಮೇಶ್ವರಂ ಕೆಫೆ ಸ್ಫೋಟ ಕೇಸ್ನಲ್ಲಿ ಬಿಜೆಪಿ ಕೈವಾಡ ಇದೆ ಎಂದು ಹೇಳಲ್ಲ. ಈ ಹಿಂದೆ ಇಂತಹದ್ದೇ ಘಟನೆಗಳಾದಾಗ ಬಿಜೆಪಿಯ ಕೈವಾಡ ಇತ್ತು. ಆದರೆ, ನನಗೆ ದಿನಾಂಕ ಮತ್ತು ಘಟನೆ ನೆನಪಿಲ್ಲ. ಜೊತೆಗೆ ಅದು ತನಿಖೆಯಲ್ಲಿ ಸಾಭೀತು ಆಗಿದೆ ಎಂದು ಎನ್.ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ