ಮುಂದಿನ ಸಿನಿಮಾ ಬಗ್ಗೆ ಅಪ್​​ಡೇಟ್ ಕೊಟ್ಟ ರಮಿಕಾ ಶಿವು

Edited By:

Updated on: Nov 16, 2026 | 12:00 PM

ಪ್ರೇಮದ ಊರಲ್ಲಿ ಚಿತ್ರದ ಯಶಸ್ಸಿನ ನಂತರ ನಟಿ ರಮಿಕಾ ತಮ್ಮ ನೆಚ್ಚಿನ ಕ್ಲೈಮ್ಯಾಕ್ಸ್ ಸನ್ನಿವೇಶದ ಬಗ್ಗೆ ಮಾತನಾಡಿದ್ದಾರೆ. ಚಿತ್ರದ ಮುಂದುವರಿದ ಭಾಗದ ಬಗ್ಗೆ ಅಭಿಮಾನಿಗಳ ಕುತೂಹಲಕ್ಕೆ ವಿರಾಮ ಹಾಕಿದ ರಮಿಕಾ, ತಮ್ಮ ಮುಂದಿನ ಯೋಜನೆಗಳ ಬಗ್ಗೆ ಸೂಕ್ಷ್ಮವಾಗಿ ಸುಳಿವು ನೀಡಿದ್ದಾರೆ. ಹೊಸ ಅವಕಾಶಗಳನ್ನು ಆಯ್ಕೆ ಮಾಡುವಲ್ಲಿ ತಾವು ಸಮಯ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಪ್ರೇಮದ ಊರಲ್ಲಿ ಸಿನಿಮಾದ ಅದ್ಭುತ ಯಶಸ್ಸನ್ನು ಸವಿಯುತ್ತಿರುವ ನಟಿ ರಮಿಕಾ ವೃತ್ತಿಜೀವನದ ಮುಂದಿನ ಯೋಜನೆ ಬಗ್ಗೆ ಮಾತನಾಡಿದ್ದಾರೆ. ಪ್ರೇಮದ ಊರಲಿ ಚಿತ್ರದ ಕ್ಲೈಮ್ಯಾಕ್ಸ್‌ ದೃಶ್ಯ ವೈಯಕ್ತಿಕವಾಗಿ ತುಂಬಾ ಇಷ್ಟವಾಗಿದೆ ಎಂದು ರಮಿಕಾ ಹೇಳಿದ್ದಾರೆ. ಸಿನಿಮಾದ 50 ದಿನಗಳ ಯಶಸ್ಸನ್ನು ಆಚರಿಸುತ್ತಿರುವ ಹೊತ್ತಿನಲ್ಲಿ, ಅಭಿಮಾನಿಗಳಲ್ಲಿ ಪ್ರೇಮದ ಊರಲ್ಲಿ ಪಾರ್ಟ್ 2 ಕುರಿತಂತೆ ಕುತೂಹಲ ಹೆಚ್ಚಾಗಿದೆ. ಆದರೆ, ನಿರ್ದೇಶಕರು ಈ ಕುರಿತು ಸ್ಪಷ್ಟನೆ ನೀಡಿದ್ದು, ಎರಡನೇ ಭಾಗ ಬರುವುದಿಲ್ಲ ಎಂದು ರಮಿಕಾ ಖಚಿತಪಡಿಸಿದ್ದಾರೆ. ಚಿತ್ರವು ಸುಖಾಂತ್ಯ ಕಂಡಿದ್ದು, ಮುಂದಿನ ಭಾಗದ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ತಮ್ಮ ಮುಂದಿನ ಚಿತ್ರ ಯೋಜನೆಗಳ ಬಗ್ಗೆ ಮಾತನಾಡಿರುವ ರಮಿಕಾ, ಪ್ರಸ್ತುತ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ದೊಡ್ಡ ಜವಾಬ್ದಾರಿ ಇರುವುದರಿಂದ, ಹೊಸ ಪ್ರಾಜೆಕ್ಟ್‌ಗಳನ್ನು ಒಪ್ಪಿಕೊಳ್ಳಲು ಸಮಯ ತೆಗೆದುಕೊಳ್ಳುತ್ತಿದ್ದೇನೆ. ಸೂಕ್ತ ಸಮಯದಲ್ಲಿ ನಾನೇ ಅಧಿಕೃತವಾಗಿ ಘೋಷಿಸುವುದಾಗಿ ರಮಿಕಾ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 16, 2026 11:57 AM
Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More