ಎಚ್ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ
ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆ ನಡೆಸಿದೆ. ಇನ್ನು ಎಷ್ಟು ಎಕರೆ ಒತ್ತುವರಿಯಾಗಿದೆ ಎನ್ನುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ರಾಮನಗರ, (ಮಾರ್ಚ್ 18): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು. ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು (ಮಾರ್ಚ್ 18) ಬೆಳಗ್ಗೆಯಿಂದಲೇ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಇನ್ನು ಸ್ಥಳಕ್ಕೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಒತ್ತುವರಿ ತೆರವು ಪರಿಶೀಲನೆ ನಡೆಸಿದ್ದಾರೆ. ಇನ್ನು ಒಟ್ಟು ಎಷ್ಟು ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಒತ್ತುವರಿ ತೆರವು ಪೂರ್ಣಗಳಿಸಿದ ನಂತರ ಮುಂದಿನ ಪ್ರಕ್ರಿಯೆ ಏನು ಎನ್ನುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಪುನೀತ್ ರಾಜ್ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

ಕೋರ್ಟ್ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
