ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಸಿ

Updated on: Mar 18, 2025 | 2:21 PM

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್​ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆ ನಡೆಸಿದೆ. ಇನ್ನು ಎಷ್ಟು ಎಕರೆ ಒತ್ತುವರಿಯಾಗಿದೆ ಎನ್ನುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ರಾಮನಗರ, (ಮಾರ್ಚ್ 18): ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ಈ ಹಿಂದೆ ರಾಮನಗರದ ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು. ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು (ಮಾರ್ಚ್​ 18) ಬೆಳಗ್ಗೆಯಿಂದಲೇ ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಇನ್ನು ಸ್ಥಳಕ್ಕೆ ರಾಮನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಒತ್ತುವರಿ ತೆರವು ಪರಿಶೀಲನೆ ನಡೆಸಿದ್ದಾರೆ. ಇನ್ನು ಒಟ್ಟು ಎಷ್ಟು ಸರ್ಕಾರಿ ಭೂಮಿ ಒತ್ತುವರಿಯಾಗಿದೆ. ಒತ್ತುವರಿ ತೆರವು ಪೂರ್ಣಗಳಿಸಿದ ನಂತರ ಮುಂದಿನ ಪ್ರಕ್ರಿಯೆ ಏನು ಎನ್ನುವ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

Loading...
Unable to load recommendations.
Follow Us