AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್​​ನಲ್ಲಿ ಹೋಗಲು ವಿಧಾನಸೌಧದಲ್ಲಿ ರ‍್ಯಾಂಪ್ ಅಳವಡಿಕೆ

ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್​​ನಲ್ಲಿ ಹೋಗಲು ವಿಧಾನಸೌಧದಲ್ಲಿ ರ‍್ಯಾಂಪ್ ಅಳವಡಿಕೆ

ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on: Mar 03, 2025 | 10:33 AM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಡಿ ನೋವಿನ ಸಮಸ್ಯೆ ಇರುವುದರಿಂದ, ವಿಧಾನಸಭೆಗೆ ಅವರ ಸುಲಭ ಪ್ರವೇಶಕ್ಕಾಗಿ ವೀಲ್‌ಚೇರ್ ಬಳಕೆಗೆ ಅನುಕೂಲವಾಗುವಂತೆ ಹಲವು ಕಡೆ ರ‍್ಯಾಂಪ್​ಗಳನ್ನು ಅಳವಡಿಸಲಾಗಿದೆ. ವಿಧಾನಸೌಧ ಲಾಂಜ್, ಆಡಳಿತ ಪಕ್ಷದ ಮೊಗಸಾಲೆ ಮತ್ತು ವಿಧಾನಸಭೆ ಪ್ರವೇಶ ದ್ವಾರದಲ್ಲಿ ರಾಂಪ್‌ಗಳನ್ನು ನಿರ್ಮಿಸಲಾಗಿದೆ. ರಾಜ್ಯಪಾಲರನ್ನು ಸ್ವಾಗತಿಸಲು ವಿಧಾನಸಭೆ ಪೂರ್ವ ಮೊಗಸಾಲೆಯಲ್ಲಿಯೂ ರಾಂಪ್ ಇದೆ.

ಬೆಂಗಳೂರು, ಫೆಬ್ರವರಿ 03: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮಂಡಿ ನೋವಿನ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ವಿಧಾನಸಭೆ ಪ್ರವೇಶ ತನಕ ವ್ಹೀಲ್ ಚೇರ್​​ನಲ್ಲಿ ಹೋಗಲು ರ‍್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳು ವ್ಹೀಲ್ ಚೇರ್ ಮೂಲಕ ಹೋಗಲು ವಿಧಾನಸೌಧ ಲಾಂಜ್, ವಿಧಾನಸಭೆ ಆಡಳಿತ ಪಕ್ಷದ ಮೊಗಸಾಲೆ ಮತ್ತು ವಿಧಾನಸಭೆ ಪ್ರವೇಶ ದ್ವಾರದ ಮೂರು ಕಡೆ ಱಂಪ್ ಹಾಕಲಾಗಿದೆ. ಇನ್ನು, ರಾಜ್ಯಪಾಲರ ಸ್ವಾಗತಿಸಲು ವಿಧಾನಸಭೆ ಪೂರ್ವ ಮೊಗಸಾಲೆ ಮೂಲಕ ಪ್ರವೇಶಿಸಲು ರ‍್ಯಾಂಪ್ ಅಳವಡಿಸಲಾಗಿದೆ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More