‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್​ ಕೇಸ್​: ವಿಚಾರಣೆಗೆ ಬಂದ ರಮ್ಯಾ

Updated on: Jan 07, 2025 | 3:53 PM

2023ರಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗಿತ್ತು. ಆ ಸಿನಿಮಾದಲ್ಲಿ ರಮ್ಯಾ ಅವರ ದೃಶ್ಯಗಳನ್ನು ಬಳಸಿಕೊಂಡಿದ್ದು ವಿವಾದಕ್ಕೆ ಕಾರಣ ಆಗಿತ್ತು. ಕೇವಲ ಪ್ರೋಮೋಗಾಗಿ ರಮ್ಯಾ ಅನುಮತಿ ನೀಡಿದ್ದರು. ಆದರೆ ಟ್ರೇಲರ್​ ಮತ್ತು ಸಿನಿಮಾದಲ್ಲಿ ಕೂಡ ದೃಶ್ಯಗಳನ್ನು ಬಳಸಿದ್ದಕ್ಕಾಗಿ ಚಿತ್ರತಂಡದ ವಿರುದ್ಧ ರಮ್ಯಾ ಕೇಸ್​ ಹಾಕಿದ್ದರು. ಅದರ ವಿಚಾರಣೆ ಈಗ ನಡೆಯುತ್ತಿದೆ.

ಅನುಮತಿ ಇಲ್ಲದೇ ರಮ್ಯಾ ಅವರ ದೃಶ್ಯಗಳನ್ನು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ರಮ್ಯಾ ಕೇಸ್​ ಹಾಕಿದ್ದರು. ಇಂದು (ಜನವರಿ 7) ನ್ಯಾಯಾಲಯಕ್ಕೆ ರಮ್ಯಾ ಹಾಜರಾಗಿದ್ದಾರೆ. ಆದರೆ ಚಿತ್ರತಂಡದವರು ವಿಚಾರಣೆಗೆ ಬಂದಿಲ್ಲ ಎಂಬ ಮಾಹಿತಿ ಇದೆ. ರಮ್ಯಾ ಅವರು ಸಾಕ್ಷಿ ತಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More