‘ಕೇಳಿದಾಗಲೆಲ್ಲ ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ
15 ಸಾವಿರ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೃಷಿ ಸಚಿವ ನರೇಂದ್ರಸ್ವಾಮಿ ಅವರು, ‘ಕೇಳಿದಾಗಲೆಲ್ಲ ಕಂಠೀಹಾರ ಕೊಡಲು ಸಾಧ್ಯವಿಲ್ಲ. ಯಾರೂ ಅಷ್ಟು ಸದೃಢರಾಗಿಲ್ಲ’ ಎಂದು ಹೇಳಿಕೆ ನೀಡಿದ್ದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ.
15 ಸಾವಿರ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಕೃಷಿ ಸಚಿವ ನರೇಂದ್ರಸ್ವಾಮಿ ಅವರು, ‘ಕೇಳಿದಾಗಲೆಲ್ಲ ಕಂಠೀಹಾರ ಕೊಡಲು ಸಾಧ್ಯವಿಲ್ಲ. ಯಾರೂ ಅಷ್ಟು ಸದೃಢರಾಗಿಲ್ಲ’ ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯನ್ನು ನಟಿ, ಮಾಜಿ ಸಂಸದೆ ರಮ್ಯಾ ಅವರು ಖಂಡಿಸಿದ್ದಾರೆ. ‘ನರೇಂದ್ರಸ್ವಾಮಿ ಅವರ ಹೇಳಿಕೆ ತಪ್ಪು. ಅವರು ಆ ರೀತಿ ಹೇಳಬಾರದಾಗಿತ್ತು. ಆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ಯಾವ ಅರ್ಥದಲ್ಲಿ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ’ ಎಂದು ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ಫ್ರೀಡಂಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಎನ್ನದೇ, ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೇ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಬೆಂಬಲ ನೀಡುವ ಸಲುವಾಗಿ ರಮ್ಯಾ ಅವರು ಕೂಡ ಫ್ರೀಡಂ ಪಾರ್ಕ್ಗೆ ಭೇಟಿ ನೀಡಿದ್ದಾರೆ. ಅವರ ಈ ಬೆಂಬಲಕ್ಕೆ ಆಶಾ ಕಾರ್ಯಕರ್ತೆಯರು ಧನ್ಯವಾದ ತಿಳಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

