‘ಕೇಳಿದಾಗಲೆಲ್ಲ ಕಂಠೀಹಾರ ಕೊಡಲು ಆಗಲ್ಲ’: ನರೇಂದ್ರಸ್ವಾಮಿ ಹೇಳಿಕೆಗೆ ರಮ್ಯಾ ಖಂಡನೆ

Updated on: Nov 24, 2026 | 9:49 PM

15 ಸಾವಿರ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೃಷಿ ಸಚಿವ ನರೇಂದ್ರಸ್ವಾಮಿ ಅವರು, ‘ಕೇಳಿದಾಗಲೆಲ್ಲ ಕಂಠೀಹಾರ ಕೊಡಲು ಸಾಧ್ಯವಿಲ್ಲ. ಯಾರೂ ಅಷ್ಟು ಸದೃಢರಾಗಿಲ್ಲ’ ಎಂದು ಹೇಳಿಕೆ ನೀಡಿದ್ದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ.

15 ಸಾವಿರ ವೇತನಕ್ಕಾಗಿ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಆದರೆ ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಕೃಷಿ ಸಚಿವ ನರೇಂದ್ರಸ್ವಾಮಿ ಅವರು, ‘ಕೇಳಿದಾಗಲೆಲ್ಲ ಕಂಠೀಹಾರ ಕೊಡಲು ಸಾಧ್ಯವಿಲ್ಲ. ಯಾರೂ ಅಷ್ಟು ಸದೃಢರಾಗಿಲ್ಲ’ ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಯನ್ನು ನಟಿ, ಮಾಜಿ ಸಂಸದೆ ರಮ್ಯಾ ಅವರು ಖಂಡಿಸಿದ್ದಾರೆ. ‘ನರೇಂದ್ರಸ್ವಾಮಿ ಅವರ ಹೇಳಿಕೆ ತಪ್ಪು. ಅವರು ಆ ರೀತಿ ಹೇಳಬಾರದಾಗಿತ್ತು. ಆ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ಯಾವ ಅರ್ಥದಲ್ಲಿ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ’ ಎಂದು ರಮ್ಯಾ ಅವರು ಪ್ರತಿಕ್ರಿಯಿಸಿದ್ದಾರೆ. ಫ್ರೀಡಂಪಾರ್ಕ್​ನಲ್ಲಿ ಆಶಾ ಕಾರ್ಯಕರ್ತೆಯರು ಹಗಲು-ರಾತ್ರಿ ಎನ್ನದೇ, ಬಿಸಿಲು, ಮಳೆ, ಚಳಿಯನ್ನೂ ಲೆಕ್ಕಿಸದೇ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಬೆಂಬಲ ನೀಡುವ ಸಲುವಾಗಿ ರಮ್ಯಾ ಅವರು ಕೂಡ ಫ್ರೀಡಂ ಪಾರ್ಕ್​ಗೆ ಭೇಟಿ ನೀಡಿದ್ದಾರೆ. ಅವರ ಈ ಬೆಂಬಲಕ್ಕೆ ಆಶಾ ಕಾರ್ಯಕರ್ತೆಯರು ಧನ್ಯವಾದ ತಿಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More