ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇಲ್ಲಿದೆ ಮುಖ್ಯ ಕಾರಣ
ಅಶ್ಲೀಲವಾಗಿ ಸಂದೇಶ ಕಳಿಸಿರುವ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ತಾವು ದೂರು ಕೊಡಲು ನಿರ್ಧರಿಸಿದ್ದು ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ.
ಅಶ್ಲೀಲವಾಗಿ ಸಂದೇಶ ಕಳಿಸಿರುವ ದರ್ಶನ್ ಅಭಿಮಾನಿಗಳ (Darshan Fans) ವಿರುದ್ಧ ನಟಿ ರಮ್ಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಪೊಲೀಸ್ ಕಮಿಷನರ್ (Bengaluru Police Commissioner) ಕಚೇರಿಗೆ ಆಗಮಿಸಿದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ‘ಸೆಲೆಬ್ರಿಟಿಯಾದ ನಮಗೆ ಟ್ರೋಲ್ ಇದ್ದೇ ಇರುತ್ತದೆ. ಆದರೆ ಈ ಮಟ್ಟಕ್ಕೆ ನನಗೆ ಯಾವಾಗಲೂ ಅನುಭವ ಆಗಿರಲಿಲ್ಲ. ರೇಣುಕಾಸ್ವಾಮಿ ಸಂದೇಶ ಕಳಿಸಿದ್ದಕ್ಕೂ ದರ್ಶನ್ ಫ್ಯಾನ್ಸ್ ಸಂದೇಶ ಕಳಿಸಿದ್ದಕ್ಕೂ ಯಾವುದೇ ವ್ಯತ್ಯಾಸ ಇಲ್ಲ ಎನಿಸಿತು. ನನಗೆ ಈ ರೀತಿ ಕಳಿಸಿದ್ದಾರೆ ಎಂದರೆ ಸಾಮಾನ್ಯ ಹೆಣ್ಣು ಮಕ್ಕಳಿಗೆ ಇನ್ನು ಯಾವ ರೀತಿ ಸಂದೇಶ ಕಳಿಸಿರಬಹುದು. ನಮ್ಮ ಸಮಾಜ ಎಷ್ಟು ಕೀಳು ಮಟ್ಟಕ್ಕೆ ಬಂದಿದೆ ಅಂತ ನನಗೆ ಬೇಸರ ಆಯಿತು. ಇದನ್ನು ಸುಮ್ಮನೆ ಬಿಡಬಾರದು ಅಂತ ನನಗೆ ಅನಿಸಿತು. ಹಾಗಾಗಿ ನಾನು ಕಮಿಷನರ್ ಸಾಹೇಬರಿಗೆ ದೂರು ಕೊಟ್ಟಿದ್ದೇನೆ’ ಎಂದು ನಟಿ ರಮ್ಯಾ (Ramya Divya Spandana) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

