AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಕಮೆಂಟ್ ಪ್ರಕರಣ: ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

ಅಶ್ಲೀಲ ಕಮೆಂಟ್ ಪ್ರಕರಣ: ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

ಮದನ್​ ಕುಮಾರ್​
|

Updated on: Mar 10, 2026 | 7:52 PM

Share

ಸಾಮಾಜಿಕ ಜಾಲತಾಣದಲ್ಲಿ ತಮಗೆ ಅಶ್ಲೀಲ ಕಮೆಂಟ್ ಹಾಗೂ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದಾರೆ. ಆ ಪ್ರಕರಣದ ವಿಚಾರಣೆ ಸಲುವಾಗಿ ಇಂದು (ಮಾರ್ಚ್ 10) ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮತ್ತು ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ (Ramya Divya Spandana) ಅವರು ಕಾನೂನು ಸಮರ ಸಾರಿದ್ದಾರೆ. ಆ ಪ್ರಕರಣದ ವಿಚಾರಣೆ ಸಲುವಾಗಿ ಇಂದು (ಮಾರ್ಚ್ 10) ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಇವತ್ತು ಸಾಕ್ಷಿ ನೀಡಬೇಕಿತ್ತು. ಕ್ರಾಸ್ ಎಕ್ಸಾಮಿನೇಷನ್​ಗೆ ಮುಂದಿನ ದಿನಾಂಕದಲ್ಲಿ ಕರೆದಿದ್ದಾರೆ. ನನಗೆ ಈ ಕೇಸ್ ಮಾಡಬೇಕು ಅಂತ ಆಸೆ ಇಲ್ಲ. ಆರೋಪಿಗಳನ್ನು ನೋಡಿದರೆ ಬೇಜಾರಾಗುತ್ತದೆ. ಆದರೆ ನಾನು ಇದನ್ನು ನನಗೋಸ್ಕರ ಮಾಡುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹೆಣ್ಮಕ್ಕಳಿಗೆ ತುಂಬಾ ಕಿರುಕುಳ ನೀಡುತ್ತಾರೆ. ಅದನ್ನು ನಿಲ್ಲಿಸಬೇಕು. ಹೆಣ್ಮಕ್ಕಳಿಗೆ ರಕ್ಷಣೆ ನೀಡಬೇಕು. ಆ ಕಾರಣಕ್ಕಾಗಿ ಕೇಸ್ ಹಾಕಿದ್ದೇನೆ’ ಎಂದು ರಮ್ಯಾ (Ramya) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More