AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಮದನ್​ ಕುಮಾರ್​
|

Updated on: Mar 10, 2026 | 10:40 PM

Share

ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಒಂದು ಮಾದರಿ ನಿರ್ಮಾಣ ಆಗುತ್ತದೆ. ಆಗ ಜನರಿಗೆ ಒಂದು ಭಯ ಬರುತ್ತದೆ. ಅಂಥ ಕಮೆಂಟ್ ಮಾಡುವುದಕ್ಕೂ ಮುಂಚೆ ಯೋಚನೆ ಮಾಡುತ್ತಾರೆ. ಯಾಕೆಂದರೆ, 2 ವರ್ಷದಿಂದ 7 ವರ್ಷಗಳ ಜೈಲು ಶಿಕ್ಷೆ ಆಗಬಹುದು. ಅವರು ಸಾಮಾನ್ಯವಾಗಿ ಟ್ರೋಲ್ ಮಾಡಿಲ್ಲ. ಮಕ್ಕಳನ್ನೂ ಸೇರಿಸಿ ಟ್ರೋಲ್ ಮಾಡಿದ್ದಾರೆ. ಹೆಂಡ್ತಿ, ಮಕ್ಕಳನ್ನು ಪೊಲೀಸರ ಎದುರಲ್ಲೇ ರೇಪ್ ಮಾಡುತ್ತೇವೆ, ಕೊಲೆ ಮಾಡುತ್ತೇವೆ ಅಂತ ಹೇಳಿದ್ದಾರೆ. ಇದನ್ನು ನಾನು ಸುಮ್ಮನೆ ಬಿಟ್ಟರೆ ಸಾಮಾನ್ಯ ಹೆಣ್ಣು ಮಕ್ಕಳ ಪರಿಸ್ಥಿತಿ ಏನಾಗಹುದು’ ಎಂದು ರಮ್ಯಾ (Ramya) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us