ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ

Updated on: Mar 16, 2025 | 6:11 PM

ನಟಿ ರಮ್ಯಾ ಅವರು ‘ಅಪ್ಪು’ ಸಿನಿಮಾ ನೋಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಪುನೀತ್ ರಾಜ್​ಕುಮಾರ್ ಫ್ಯಾನ್ಸ್ ಬಗ್ಗೆ ಮಾತನಾಡಿದ್ದಾರೆ. ಪುನೀತ್ ಜೊತೆಗಿನ ತಮ್ಮ ಒಡನಾಟವನ್ನು ಕೂಡ ರಮ್ಯಾ ನೆನಪು ಮಾಡಿಕೊಂಡಿದ್ದಾರೆ. ‘ಅಪ್ಪು’ ರೀತಿಯೇ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಬೇಕು ಎಂದು ರಮ್ಯಾ ಹೇಳಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಅವರು ನಿಧನರಾದ ನಂತರವೂ ಅವರ ಮೇಲೆ ಜನರು ಇಟ್ಟಿರುವ ಅಭಿಮಾನ ಕಡಿಮೆ ಆಗಿಲ್ಲ. ಆ ಬಗ್ಗೆ ರಮ್ಯಾ (Ramya Divya Spandana) ಅವರು ಮಾತನಾಡಿದ್ದಾರೆ. ‘ಈ ಥರ ಫ್ಯಾನ್ಸ್ ಕ್ರೇಜ್ ಪಡೆಯಲು ಏನೋ ಪುಣ್ಯ ಮಾಡಿರಬೇಕು. ಇಷ್ಟು ವರ್ಷ ಆದ್ಮೇಲೆ ಕೂಡ ಯಾರ್ಯಾರೋ ಹೊಸಬರು ಬರುತ್ತಾರೆ. ಆದರೂ ಫ್ಯಾನ್ಸ್ ಇಟ್ಟಿರುವ ನಿಯತ್ತು ಎಂದಿಗೂ ಹೀಗೆಯೇ ಇರುತ್ತದೆ. ಅಪ್ಪು ಅವರು ಹೋದಮೇಲೆ ಕೂಡ ಜನರು ಇಷ್ಟು ಪ್ರೀತಿ ತೋರಿಸುತ್ತಿದ್ದಾರೆ ಎಂದರೆ ಅವರು ಎಷ್ಟು ಒಳ್ಳೆಯ ಕೆಲಸ ಮಾಡಿರಬಹುದು ಅಂತ ನೀವೇ ಯೋಚಿಸಿ ನೋಡಿ’ ಎಂದಿದ್ದಾರೆ ರಮ್ಯಾ ದಿವ್ಯ ಸ್ಪಂದನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More