ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ

Updated on: Jul 28, 2025 | 7:51 PM

ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳ ಬಗ್ಗೆ ಅಶ್ಲೀಲವಾಗಿ ಕಮೆಂಟ್, ಮೆಸೇಜ್ ಮಾಡುವವರ ಹಾವಳಿ ಹೆಚ್ಚಾಗಿದೆ. ಅಂಥವರಿಗೆ ಪಾಠ ಕಲಿಸಲು ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದಾರೆ. ತಮಗೆ ಅವಾಚ್ಯ ಪದಗಳನ್ನು ಬಳಸಿ ಸಂದೇಶ ಕಳಿಸಿರುವ ದರ್ಶನ್ ಅಭಿಮಾನಿಗಳ ಮೇಲೆ ರಮ್ಯಾ ಅವರು ದೂರು ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಗಳ ಬಗ್ಗೆ ಅಶ್ಲೀಲವಾಗಿ ಕಮೆಂಟ್, ಮೆಸೇಜ್ ಮಾಡುವವರ ಕಾಟ ಹೆಚ್ಚಾಗಿದೆ. ಅಂಥವರಿಗೆ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನು ಸಮರ ಸಾರಿದ್ದಾರೆ. ಅವಾಚ್ಯ ಪದಗಳನ್ನು ಬಳಸಿ ತಮಗೆ ಸಂದೇಶ ಕಳಿಸಿರುವ ದರ್ಶನ್ ಅಭಿಮಾನಿಗಳ (Darshan Fans) ವಿರುದ್ಧ ರಮ್ಯಾ ದೂರು ನೀಡಿದ್ದಾರೆ. ಈ ವೇಳೆ ಒಂದಷ್ಟು ವಿಷಯಗಳ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು. ‘2 ವರ್ಷಗಳ ಹಿಂದೆಯೇ ನಾನು ಪೋಸ್ಟ್ ಮಾಡಿದ್ದೆ. ಯಶ್-ಸುದೀಪ್ ನಡುವೆ ಫ್ಯಾನ್ಸ್ ವಾರ್ ನಡೆಯುತ್ತಿತ್ತು. ಅವರ ಹೆಂಡತಿ, ಮಕ್ಕಳ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ್ದರು. ಆಗ ನನಗೆ ಬೇಸರ ಆಯಿತು. ಆಗಲೇ ದೂರು ಕೊಟ್ಟಿದ್ದರೆ ಈಗ ಈ ರೀತಿ ನಡೆಯುತ್ತಿರಲಿಲ್ಲ’ ಎಂದಿದ್ದಾರೆ ರಮ್ಯಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More