‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ರಿವೀಲ್ ಆಯ್ತು ಅಚ್ಚರಿಯ ಮಾಹಿತಿ

Edited By:

Updated on: Mar 11, 2025 | 8:59 AM

‘ಅಪ್ಪು’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ಇದಕ್ಕೆ ಎಲ್ಲ ಕಡೆಗಳಲ್ಲಿ ಸಿದ್ಧತೆ ನಡೆಯುತ್ತಿದೆ. ಥಿಯೇಟರ್​ಗಳಲ್ಲಿ ಸೆಟ್​ಗಳನ್ನು ಹಾಕಲಾಗುತ್ತಿದೆ. ಈ ಮಧ್ಯೆ ಈ ಚಿತ್ರದ ಬಗ್ಗೆ ಹೊಸ ಹೊಸ ಮಾಹಿತಿ ರಿವೀಲ್ ಆಗುತ್ತಿದೆ. ಈ ಬಗ್ಗೆ ಸ್ಟಂಟ್ ಮಾಸ್ಟರ್ ವೆಂಕಟೇಶ್ ಅವರು ಮಾತನಾಡಿದ್ದಾರೆ .

ಪುನೀತ್ ರಾಜ್​ಕುಮಾರ್ ನಟನೆಯ ‘ಅಪ್ಪು’ ಸಿನಿಮಾ ಮಾರ್ಚ್ 14ರಂದು ರೀ ರಿಲೀಸ್ ಆಗುತ್ತಿದೆ. ಈ ಚಿತ್ರದ ಮೂಲಕ ಪುನೀತ್ ಅವರನ್ನು ಮತ್ತೆ ನೆನಪಿಸಿಕೊಳ್ಳಲಾಗುತ್ತಿದೆ. ಈ ಚಿತ್ರದ ಸ್ಟಂಟ್ ಮಾಸ್ಟರ್ ವೆಂಕಟೇಶ್ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಈ ಚಿತ್ರಕ್ಕೆ ರಕ್ಷಿತಾ ನಾಯಕಿ. ಆದರೆ, ಮೊದಲು ಈ ಚಿತ್ರದಲ್ಲಿ ರಕ್ಷಿತಾ ಬದಲು ರಮ್ಯಾಗೆ ಅವಕಾಶ ನೀಡಲಾಗಿತ್ತು ಎಂದು ಅವರು ರಿವೀಲ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More