ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು

Updated on: Jul 28, 2025 | 8:53 PM

ದರ್ಶನ್ ಅಭಿಮಾನಿಗಳು ಮಾಡಿದ ಅವಾಂತರದಿಂದ ಕನ್ನಡ ಚಿತ್ರರಂಗದಲ್ಲಿ ವಿವಾದ ಶುರುವಾಗಿದೆ. ನಟಿ ರಮ್ಯಾ ಅವರಿಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳಿಸಿದ್ದಾರೆ. ಬಳಿಕ ನಟಿ ರಕ್ಷಿತಾ ಪ್ರೇಮ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸೂಚ್ಯವಾಗಿ ಸೋಶಿಯಲ್ ಮೀಡಿಯಾಗಳಲ್ಲಿ ಕೆಲವು ಸಾಲುಗಳನ್ನು ಪೋಸ್ಟ್ ಮಾಡಿದರು.

ನಟ ದರ್ಶನ್ (Darshan) ಅವರ ಅಭಿಮಾನಿಗಳು ಮಾಡಿದ ಅವಾಂತರದಿಂದ ಕನ್ನಡ ಚಿತ್ರರಂಗದಲ್ಲಿ ವಿವಾದ ಶುರುವಾಗಿದೆ. ನಟಿ ರಮ್ಯಾ ಅವರಿಗೆ ದರ್ಶನ್ ಫ್ಯಾನ್ಸ್ ಅಶ್ಲೀಲ, ಅಸಭ್ಯ ಸಂದೇಶಗಳನ್ನು ಕಳಿಸಿದ್ದಾರೆ. ಅದರ ಬೆನ್ನಲ್ಲೇ ನಟಿ ರಕ್ಷಿತಾ ಪ್ರೇಮ್, ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಅವರು ಸೂಚ್ಯವಾಗಿ ಸೋಶಿಯಲ್ ಮೀಡಿಯಾದಲ್ಲಿ ಕೆಲವು ಸಾಲುಗಳನ್ನು ಪೋಸ್ಟ್ ಮಾಡಿದ್ದಾರೆ. ಅವುಗಳ ಬಗ್ಗೆ ಎದುರಾದ ಪ್ರಶ್ನೆಗೆ ರಮ್ಯಾ ಅವರು ನೇರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ರಮ್ಯಾ (Ramya Divya Spandana) ಮಾತನಾಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More