ಸಿಎಂ ಡಿಕೆಶಿ ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ಮಾಜಿ ಸಂಸದೆ ರಮ್ಯಾ
ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಮಾಜಿ ಸಂಸದೆ, ನಟಿ ರಮ್ಯಾ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕನಿಷ್ಟ 2-3 ಮಹಿಳಾ ಸಚಿವರಾದರೂ ಇರಬೇಕಿತ್ತು ಎಂದು ಅವರು ಹೇಳಿದ್ದು, ಇದು ಕೇವಲ ತನ್ನ ಅಭಿಪ್ರಾಯ ಎಂಬುದನ್ನೂ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಆಗಸ್ಟ್ 04: ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಐವರು ಮಹಿಳಾ ಶಾಸಕರ ಪೈಕಿ 2-3 ಜನರಿಗಾದರೂ ಸಚಿವ ಸ್ಥಾನ ಸಿಗಬೇಕಿತ್ತು. ತಮ್ನ ಪ್ರಕಾರ ಕನಿಷ್ಠ ಒಬ್ಬರನ್ನಾದರೂ ಮಂತ್ರಿ ಮಾಡಬೇಕಿತ್ತು ಎಂದವರು ತಿಳಿಸಿದ್ದಾರೆ. ಇದೇ ವೇಳೆ, ಯಾವಾಗಲೂ ಕರ್ನಾಟಕ, ಕಾವೇರಿ ಮತ್ತು ರೈತರ ಪರವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕಾವೇರಿ ನೀರು ವಿವಾದದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟದ ಭಾಗವಾಗಿ ಎಂ.ಬಿ. ಪಾಟೀಲ್ ಅವರೊಂದಿಗೆ ಇದ್ದುದನ್ನು ಕೂಡ ನೆನಪಿಸಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಇಂದು ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಶ್ರಾವಣ ಶನಿವಾರ
ಇಷ್ಟು ಕೀಳು ಹೇಳಿಕೆ ನೀಡೋದಾ?; ರಾಹುಲ್ ವಿರುದ್ಧ ರಾಜನಾಥ್ ಸಿಂಗ್ ವಾಗ್ದಾಳಿ
ಚಿತ್ರದುರ್ಗದ ಮಂಕಿಮ್ಯಾನ್ ಜ್ಯೋತಿರಾಜ್ಗೆ ಮದುವೆ ಫಿಕ್ಸ್: ಹುಡುಗಿ ಯಾರು?
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಪೊಲೀಸರ ವಿರುದ್ಧದ ತನಿಖೆ ಕ್ಲೋಸ್

