ಸಿಎಂ ಡಿಕೆಶಿ ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ಮಾಜಿ ಸಂಸದೆ ರಮ್ಯಾ

Edited By:

Updated on: Aug 04, 2026 | 10:23 PM

ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಮಾಜಿ ಸಂಸದೆ, ನಟಿ ರಮ್ಯಾ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕನಿಷ್ಟ 2-3 ಮಹಿಳಾ ಸಚಿವರಾದರೂ ಇರಬೇಕಿತ್ತು ಎಂದು ಅವರು ಹೇಳಿದ್ದು, ಇದು ಕೇವಲ ತನ್ನ ಅಭಿಪ್ರಾಯ ಎಂಬುದನ್ನೂ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 04: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗದ ಬಗ್ಗೆ ಮಾಜಿ ಸಂಸದೆ, ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ಐವರು ಮಹಿಳಾ ಶಾಸಕರ ಪೈಕಿ 2-3 ಜನರಿಗಾದರೂ ಸಚಿವ ಸ್ಥಾನ ಸಿಗಬೇಕಿತ್ತು. ತಮ್ನ ಪ್ರಕಾರ ಕನಿಷ್ಠ ಒಬ್ಬರನ್ನಾದರೂ ಮಂತ್ರಿ ಮಾಡಬೇಕಿತ್ತು ಎಂದವರು ತಿಳಿಸಿದ್ದಾರೆ. ಇದೇ ವೇಳೆ, ಯಾವಾಗಲೂ ಕರ್ನಾಟಕ, ಕಾವೇರಿ ಮತ್ತು ರೈತರ ಪರವಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕಾವೇರಿ ನೀರು ವಿವಾದದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟದ ಭಾಗವಾಗಿ ಎಂ.ಬಿ. ಪಾಟೀಲ್ ಅವರೊಂದಿಗೆ ಇದ್ದುದನ್ನು ಕೂಡ ನೆನಪಿಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More