ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ: ಸ್ವತಃ ಮಾಹಿತಿ ಹಂಚಿಕೊಂಡ MLA
ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರು ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ ಓಡಿಸಿದ್ದಕ್ಕಾಗಿ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ. ಜನಪ್ರತಿನಿಧಿಗಳು ಜನರಿಗೆ ಮಾದರಿಯಾಗಬೇಕು ಎಂಬ ಸಂದೇಶ ನೀಡುವ ನಿಟ್ಟಿನಲ್ಲಿ ಪೊಲೀಸರ ಈ ಕ್ರಮ ಶ್ಲಾಘನೀಯವಾಗಿದೆ. ನಿಯಮ ಎಲ್ಲರಿಗೂ ಸಮಾನ ಎಂಬುದು ಇದರಿಂದ ಸಾಬೀತಾಗಿದೆ.
ಹಾವೇರಿ, ಆಗಸ್ಟ್ 26: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡಿದ ಕಾರಣ ಪೊಲೀಸರು ರಾಣೇಬೆನ್ನೂರು ಶಾಸಕ ಪ್ರಕಾಶ್ ಕೋಳಿವಾಡ ಅವರಿಗೆ 500 ರೂಪಾಯಿ ದಂಡ ವಿಧಿಸಿದ್ದಾರೆ. ಆ.25ರಂದು ಶಾಸಕ ಪ್ರಕಾಶ್ ವಿರುದ್ಧ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದ್ದ ಹಿನ್ನೆಲೆ ಶಾಸಕರ ಮನೆ ಬಾಗಿಲಿಗೆ ಬಂದು ನೋಟಿಸ್ ನೀಡಲಾಗಿತ್ತು. ನೋಟಿಸ್ ಆಧರಿಸಿ ಶಾಸಕರು ದಂಡ ಪಾವತಿಸಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಶಾಸಕರು ಮಾಹಿತಿ ಹಂಚಿಕೊಂಡಿದ್ದು, ಎಸ್ಪಿ ಮೇಡಂ ಅವರು ನೋಟಿಸ್ ನೀಡಿದ್ದಾರೆ. ಪೊಲೀಸ್ ಸಿಬಂದಿ ತಮ್ಮ ಕರ್ತವ್ಯ ನಿರ್ವಹಿಸಿದ್ದು, ಅದನ್ನು ಗೌರವಿಸುತ್ತೇನೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

