AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಂಗಸಮುದ್ರ’ ಟ್ರೈಲರ್ ಬಿಡುಗಡೆ, ಅಪ್ಪು ನಟಿಸಬೇಕಿದ್ದ ಸಿನಿಮಾ ಇದು

‘ರಂಗಸಮುದ್ರ’ ಟ್ರೈಲರ್ ಬಿಡುಗಡೆ, ಅಪ್ಪು ನಟಿಸಬೇಕಿದ್ದ ಸಿನಿಮಾ ಇದು

ಮಂಜುನಾಥ ಸಿ.
|

Updated on:Jan 02, 2024 | 10:01 PM

Share

Rangasamudra: ಪುನೀತ್ ರಾಜ್​ಕುಮಾರ್ ನಟಿಸಬೇಕಿದ್ದ ‘ರಂಗಸಮುದ್ರ’ ಕನ್ನಡ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಲಾಗಿದೆ.

ಕನ್ನಡದ ‘ರಂಗಸಮುದ್ರ’ (Rangasamudra) ಸಿನಿಮಾದ ಟ್ರೈಲರ್ (Trailer) ಅನ್ನು ಇಂದು (ಜನವರಿ 02) ರಾಘವೇಂದ್ರ ರಾಜ್​ಕುಮಾರ್, ರಂಗಾಯಣ ರಘು ಇನ್ನಿತರೆ ಗಣ್ಯರು, ಸಿನಿಮಾ ಸೆಲೆಬ್ರಿಟಿಗಳು ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ನಟ ಪುನೀತ್ ರಾಜ್​ಕುಮಾರ್ ಪ್ರಮುಖ ಪಾತ್ರವೊಂದರಲ್ಲಿ ನಟಿಸಬೇಕಿತ್ತು, ಕತೆ ಕೇಳಿ ಒಪ್ಪಿಗೆಯನ್ನೂ ನೀಡಿದ್ದರು. ಆದರೆ ಅವರ ಅಗಲಿಕೆಯಿಂದ ಅದು ಸಾಧ್ಯವಾಗಲಿಲ್ಲ. ಅವರ ಬದಲಿಗೆ ರಾಘವೇಂದ್ರ ರಾಜ್​ಕುಮಾರ್ ಅವರು ಸಿನಿಮಾದಲ್ಲಿ ನಟಿಸಿದ್ದಾರೆ. ಸಾಮಾಜಿಕ ವಿಷಯವನ್ನು ಇರಿಸಿಕೊಂಡು ಮಾಡಿರುವ ಸಿನಿಮಾ ಇದಾಗಿದ್ದು, ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಹಾಡೊಂದನ್ನು ಹಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 02, 2024 10:00 PM

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More