ಈ ಸಿನಿಮಾ ಒಪ್ಪಿಕೊಳ್ಳೋಕೆ ಭಯವಾಯ್ತು; ‘ಅಜ್ಞಾತವಾಸಿ’ ಬಗ್ಗೆ ರಂಗಾಯಣ ರಘು ನೇರಮಾತು
ನಟ ರಂಗಾಯಣ ರಘು ಅವರು ‘ಅಜ್ಞಾತವಾಸಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಟ್ರೇಲರ್ ಮೂಲಕ ಈ ಸಿನಿಮಾ ಗಮನ ಸೆಳೆದಿದೆ. ಏಪ್ರಿಲ್ 11ರಂದು ಈ ಸಿನಿಮಾ ಬಿಡುಗಡೆ ಆಗುತ್ತಿದೆ. ಸಿನಿಮಾದ ಕುರಿತು ‘ಟಿವಿ9’ ನಡೆಸಿದ ವಿಶೇಷ ಸಂದರ್ಶನದಲ್ಲಿ ರಂಗಾಯಣ ರಘು ಅವರು ವಿವರವಾಗಿ ಮಾತನಾಡಿದ್ದಾರೆ.
ಟ್ರೇಲರ್ ನೋಡಿದ ಎಲ್ಲರಿಗೂ ‘ಅಜ್ಞಾತವಾಸಿ’ ಸಿನಿಮಾ (Agnyathavasi) ಮೇಲೆ ನಿರೀಕ್ಷೆ ಮೂಡಿತು. ಈ ಚಿತ್ರದಲ್ಲಿ ರಂಗಾಯಣ ರಘು ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಸಿದ್ದು ಮೂಲಿಮನಿ, ಪಾವನಾ ಗೌಡ, ಶರತ್ ಲೋಹಿತಾಶ್ವ ಮುಂತಾದವರು ಸಹ ಪಾತ್ರವರ್ಗದಲ್ಲಿ ಇದ್ದಾರೆ. ಜನಾರ್ಧನ್ ಚಿಕ್ಕಣ್ಣ ನಿರ್ದೇಶನ ಮಾಡಿರುವ ‘ಅಜ್ಞಾತವಾಸಿ’ ಸಿನಿಮಾಗೆ ಹೇಮಂತ್ ಎಂ. ರಾವ್ ಅವರು ಬಂಡವಾಳ ಹೂಡಿದ್ದಾರೆ. ಈ ಸಿನಿಮಾ ಬಗ್ಗೆ ರಂಗಾಯಣ ರಘು (Rangayana Raghu) ಅವರಿಗೆ ವಿಶೇಷ ಹೆಮ್ಮೆ ಇದೆ. ‘ಈ ಚಿತ್ರದಲ್ಲಿ ಎಲ್ಲ ಪಾತ್ರಗಳು ಚೆನ್ನಾಗಿವೆ. ಕಥೆ ಕೇಳಿದಾಗ ಈ ಸಿನಿಮಾ ಒಪ್ಪಿಕೊಳ್ಳೋಕೆ ಭಯ ಆಯಿತು’ ಎಂದು ಹೇಳಿರುವ ಅವರು, ಅದಕ್ಕೆ ಕಾರಣವನ್ನೂ ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
