ರಂಗಾಯಣ ರಘು (Rangayana Raghu) ಭಿನ್ನ ಪಾತ್ರದಲ್ಲಿ ನಟಿಸಿರುವ ‘ಶಾಖಾಹಾರಿ’ ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ರಂಗಾಯಣ ರಘು ಅವರ ನಟನೆಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯ ಒಂದು ಊರಿನಲ್ಲಿ ನಡೆಯುವ ಕಥೆಯನ್ನು ‘ಶಾಖಾಹಾರಿ’ ಸಿನಿಮಾ ಒಳಗೊಂಡಿದೆ. ಮಲೆನಾಡಿನಲ್ಲಿ ನಡೆಯುವ ಒಂದಿಷ್ಟು ನಿಗೂಢ ಘಟನೆಗಳ ಸುತ್ತಮುತ್ತ ಈ ಕಥೆಯನ್ನು ಹೆಣೆಯಲಾಗಿದೆ. ರಂಗಾಯಣ ರಘು ಅಡುಗೆ ಭಟ್ಟನಾಗಿ, ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ಫೆಬ್ರವರಿ 16ರಂದು ಬಿಡುಗಡೆ ಆಗಲಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ