ಕಾಂಗ್ರೆಸ್ ಶಾಸಕ ಜಮೀರ್ ಖಾನ್ ವೈಭವೋಪೇತ ನಿವಾಸಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಭೇಟಿ; ಜಮೀರ್ ನಮ್ಮ ಹೀರೋ ಎಂದ ಸುರ್ಜೆವಾಲಾ
ಅಭಿಯಾನದ ವೇಳೆ ಜವಹಾರ್ ಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು. ಬೃಹತ್ ಕಾರ್ಯಕ್ರಮಕ್ಕೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಚಾಲನೆ ನೀಡಿ ಮಾತನಾಡಿದ್ದರು.
ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆಗೆ ಕಾಂಗ್ರೆಸ್ನ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭೇಟಿ ನೀಡಿದರು. ಜಮೀರ್ ಅದ್ದೂರಿ ಮನೆಗೆ ಭೇಟಿ ನೀಡಿದ್ದ ರಣದೀಪ್ ಸುರ್ಜೇವಾಲಾ ಕೆಲ ಕಾಲ ಚರ್ಚೆ ನಡೆಸಿದರು. ನಿವಾಸಕ್ಕೆ ಆಗಮಿಸಿದ ರಾಜ್ಯ ಉಸ್ತುವಾರಿ ಸುರ್ಜೇವಾಲಾರನ್ನು ಜಮೀರ್ ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಅತಿಥಿಯಾಗಿ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿಗೆ ತಿನ್ನಲು ಸಿಹಿ ನೀಡಿದರು. ಈ ವೇಳೆ ಪಕ್ಷದ ಕೆಲ ಕಾರ್ಯಕರ್ತರು ಇದ್ದರು. 12 ವರ್ಷದ ಬಳಿಕ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಿನ್ನೆ ನಡೆಯಿತು. ಅಭಿಯಾನದ ವೇಳೆ ಜವಹಾರ್ ಲಾಲ್ ನೆಹರು ಜನ್ಮದಿನಾಚರಣೆ ಆಚರಿಸಲಾಯಿತು. ಬೃಹತ್ ಕಾರ್ಯಕ್ರಮಕ್ಕೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಚಾಲನೆ ನೀಡಿ ಮಾತನಾಡಿದ್ದರು. ನೆಹರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಜೈಲಿಗೆ ಹೋಗಿದ್ದರು ಎಂದು ಅಭಿಪ್ರಾಯಪಟ್ಟಿದ್ದರು.
Published on: Nov 15, 2021 10:18 AM
Latest Videos